ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಬೆಟ್ಟದ ಒಂದು ಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ.
ಮೈಸೂರಿನಿಂದ ಉತ್ತರಹಳ್ಳಿ ಮಾರ್ಗವಾಗಿ ಸಾಗುವ ಪ್ರದೇಶದಲ್ಲಿ ಈ ಬೆಂಕಿ ಕಾಣಿಸಿಕೊಂಡಿದ್ದು, ಬಿರುಬೇಸಿಗೆಯ ತಾಪಮಾನ ಹೆಚ್ಚುತ್ತಿರುವ ಹೊತ್ತಿಗೆ ಬೆಂಕಿಯ ಕೆನ್ನಾಲಿಗೆ ಕ್ಷಣ ಕ್ಷಣಕ್ಕೂ ವ್ಯಾಪಿಸುತ್ತಿದೆ.
ಘಟನೆಯ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.ಇದನ್ನು ಓದಿ –ಮಂಡ್ಯದಲ್ಲಿ ಜಮೀನಿಗೆ ಹೋದ ರೈತನ ಮೇಲೆ ಚಿರತೆ ದಾಳಿ
ಈ ಬೆಂಕಿ ಕಿಡಿಗೇಡಿಗಳ ಕೃತ್ಯವೇ ಅಥವಾ ಕಾಡ್ಗಿಚ್ಚಿನಿಂದ ಉಂಟಾಗಿದೆಯೇ ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು