December 29, 2024

Newsnap Kannada

The World at your finger tips!

south india

ಬೆಂಗಳೂರಿನಲ್ಲಿ ಶಾಪಿಂಗ್ ಮಾಲ್‍ನಲ್ಲಿ ಬೆಂಕಿ : ಲಕ್ಷಾಂತರ ರು ವಸ್ತು ಬೆಂಕಿಗೆ ಆಹುತಿ

Spread the love

ಬೆಂಗಳೂರಿನಲ್ಲಿ ಶಾಪಿಂಗ್ ಮಾಲ್‍ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಗೃಹ ಬಳಕೆ ವಸ್ತುಗಳೆಲ್ಲಾ ಬೆಂಕಿಗೆ ಆಹುತಿಯಾದ ಘಟನೆ ಜರುಗಿದೆ.

ಅರಕೆರೆ ಗೇಟ್ ಬಳಿಯ ಸೌಥ್ ಇಂಡಿಯನ್ ಮಾಲ್‍ನ ನೆಲ ಮಹಡಿಯಲ್ಲಿ ಈ ಘಟನೆ ನಡೆದಿದೆ. ಮಾಲ್‍ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ಇದೆ.

ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಮಾಲ್‍ನಲ್ಲಿ ಯಾವ ಸಿಬ್ಬಂದಿ ಇರಲಿಲ್ಲ. ಇದರಿಂದಾಗಿ ಬೆಂಕಿ ಕಾಣಿಸಿಕೊಂಡರೂ ತಕ್ಷಣ ಯಾರಿಗೂ ತಿಳಿದಿರಲಿಲ್ಲ.ನಂತರ ನೈಟ್ ಬೀಟ್‍ನಲ್ಲಿದ್ದ ಪೊಲೀಸರಿಗೆ ಮಾಲ್‍ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ವಿಚಾರ ತಿಳಿದಿದೆ. ಆದರೆ ವಿಷಯ ತಿಳಿಯುವ ವೇಳೆಗೆ ಮಾಲ್‍ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು, ಗೃಹಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.


ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುತ್ತಿರುವುದರಲ್ಲಿ ನಿರತವಾಗಿದೆ. ಏಳು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

Copyright © All rights reserved Newsnap | Newsever by AF themes.
error: Content is protected !!