ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಹಳ್ಳಕ್ಕೆ ಬಿದ್ದು ಪಲ್ಟಿಯಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಕಾರಿನಲ್ಲೇ ಸಜೀವ ದಹನಗೊಂಡ ಧಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ ಹಲಗೂರಿನ ಬಳಿ ಶುಕ್ರವಾರ ಬೆಳಗಿನ ಜಾವ ಸಂಭವಿದೆ.
ಹಲಗೂರು ಬಳಿ ಕನಕಪುರ- ಮಳವಳ್ಳಿ ರಸ್ತೆಯಲ್ಲಿ ಮುಂಜಾನೆ ಈ ದುರ್ಘಟನೆ ಸಂಭವಿಸಿದೆ.
ಕಾರಿನಲ್ಲಿದ್ದ ಶೇಖ್ ಫೈಸಲ್ (44) ಮೆಹಕ್ (33) ಶೇಖ್ ಆಯಿಲ್ (11) ಕಾರಿನಲ್ಲೇ ದಹನಗೊಂಡವರು. ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚಾಮರಾಜನಗರ ಜಿಲ್ಲೆ ಹನೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಈ ಕಾರು ಹಲಗೂರು ಬಳಿ ಅಯತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ.
ಕಾರಿನಿಂದ ಹೊರ ಬರಲಾಗದೆ ಮೂವರು ಕಾರಿನಲ್ಲೆ ಸಜೀವ ದಹನವಾದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಹಲಗೂರು ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ