ರಂಜನ್ ಚಿಣ್ಣಪ್ಪ ಎಂಬಾತ ಗುಂಡು ಹಾರಿಸಿದ ವ್ಯಕ್ತಿ. ಸಿದ್ದಾಪುರ ರಸ್ತೆಯ ವರ್ತಕ ಕೆ.ಬೋಪಣ್ಣ ಅವರ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಕೂದಲಳೆಯ ಅಂತರ ದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಂಜನ್‍ಗೆ ಸೇರಿದ ಮನೆಯ ಮುಂಭಾಗದ ಅಂಗಡಿ ಮಳಿಗೆಯಲ್ಲಿ ಬೋಪಣ್ಣ ಮತ್ತು ಆತನ ಪಾಲುದಾರರು ಅಡಿಕೆ ಮಂಡಿಯನ್ನು ನಡೆಸುತ್ತಿದ್ದರು.
ಈ ಅಂಗಡಿ ಮಳಿಗೆಯನ್ನು ಖಾಲಿ ಮಾಡುವಂತೆ ಈ ಹಿಂದೆ ರಂಜನ್ ಸೂಚಿಸಿದ್ದ. ಇದಕ್ಕೆ ಬೋಪಣ್ಣ ಕಾಲಾವಕಾಶವನ್ನು ಕೇಳಿದ್ದರು ಎನ್ನಲಾಗಿದೆ.
ಮತ್ತೆ ಪುನಃ ರಂಜನ್ ಬೊಪಣ್ಣರವರ ಅಂಗಡಿಗೆ ತೆರಳಿ ಖಾಲಿ ಮಾಡುವಂತೆ ಕೇಳಿಕೊಂಡಾಗ ಇಬ್ಬರ ನಡುವೆ ಮಾತಿನ ಚಕಮುಕಿ ನಡೆದಿದೆ. ಈ ವೇಳೆ ರಂಜನ್ ತನ್ನ ಬಳಿ ಇದ್ದ ರಿವಾಲ್ವಾರ್ ನಿಂದ ಏಕಾಏಕಿ ಗುಂಡು ಹಾರಿಸಿದ್ದಾನೆ.
ಬಳಿಕ ರಂಜನ್ ಮೇಲೆ ಕೂಡ ಹಲ್ಲೆ ನಡೆಸಿದ್ದಾನೆ, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ರಾಜನ್ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನು ಓದಿ –ಗಣಂಗೂರು ಟೋಲ್ ಬಳಿ ಬಸ್ ಗೆ ಬೆಂಕಿ ಬಿದ್ದು ಸಂಪೂರ್ಣ ಭಸ್ಮ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು