ಬೆಂಗಳೂರಿನಲ್ಲಿ ಕೋವಿಡ್ ಕಡಿಮೆ ಆಗಲಿ ಅಥವಾ ಜಾಸ್ತಿ ಆಗಲಿ ಫೆಬ್ರವರಿ ಆರಂಭದಿಂದಲೇ ಬೆಂಗಳೂರಿನಲ್ಲಿ ಶಾಲೆ ಆರಂಭವಾಗುತ್ತವೆ.
ಈ ವಿಷಯವನ್ನು ಮಡಿಕೇರಿ ಮೂನಾ೯ಡಿನಲ್ಲಿ ಸುದ್ದಿಗಾರರಿಗೆ ಸೂಚ್ಯವಾಗಿ ತಿಳಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಕಳೆದ ವಾರದ ಕೋವಿಡ್ ಸಂಬಂಧ ಸಭೆ ನಡೆಸುವ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಶಾಲೆ ಆರಂಭಿಸುವ ಬಗ್ಗೆ ಚರ್ಚಿಸಲಾಗಿತ್ತು. ಇದೇ 29 ರಂದು ನಡೆಯುವ ಸಭೆಯಲ್ಲಿ ಶಾಲೆಗಳ ಅರಂಭ ಮಾಡುವ ಬಗ್ಗೆ ನಿರ್ಧಾರ ಮಾಡುವುದಾಗಿ ತಿಳಿಸಿದರು.
ಈಗಾಗಲೇ ಬೆಂಗಳೂರಿನಲ್ಲಿ ಪ್ರತಿದಿನ ಕೋವಿಡ್ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಹೀಗಾಗಿ ಶಾಲೆಗಳನ್ನು ಓಪನ್ ಮಾಡುವ ಸಾಧ್ಯತೆಗಳು ಜಾಸ್ತಿ ಇದೆ ಎಂದರು.
ಈಗಾಗಲೇ ತಜ್ಞರು ಮೂರನೇ ಅಲೆಯಲ್ಲಿ ಹೇಳಿದಂತೆ ರಾಜ್ಯದಲ್ಲಿ ಒಟ್ಟು 77ಸಾವಿರ ಶಾಲೆಯನ್ನು ಪ್ರಾರಂಭಿಸಿದ್ದೇವೆ. ಐದು ಜಿಲ್ಲೆಗಳಲ್ಲಿ ಶಾಲೆಗಳನ್ನೇ ಬಂದ್ ಮಾಡಿಲ್ಲ. 19 ಜಿಲ್ಲೆಗಳಲ್ಲಿ 246 ಶಾಲೆಗಳನ್ನು ಬಂದ್ ಮಾಡಲಾಗಿತ್ತು. ಅದು ಕೂಡ 3ರಿಂದ 7 ದಿನ ಬಂದ್ ಮಾಡಿದ್ದೆವು. ಪೂರ್ಣವಾಗಿ ಬಂದ್ ಮಾಡಿದ್ದು ಅಂದರೆ ಧಾರವಾಡ, ಹುಬ್ಬಳ್ಳಿ, ಮೈಸೂರು, ಮಂಡ್ಯ, ಹಾಗೂ ಬೆಂಗಳೂರಿನ ಮಹಾನಗರಗಳಲ್ಲಿ ಮಾತ್ರ ಎಂದು ಹೇಳಿದರು.
ಹತ್ತನೇ ತರಗತಿಯ ಪರೀಕ್ಷೆ ದಿನಾಂಕವನ್ನು ನಿಗದಿ ಮಾಡಲಾಗಿದೆ. ಇದೇ ರೀತಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತದೆ. ಮಾಚ್೯ 28 ರಿಂದ ಎಸ್‍ಎಸ್ ಎಲ್‍ಸಿ ಪರೀಕ್ಷೆ ದಿನಾಂಕವನ್ನು ಘೋಷಿಸಲಾಗಿದೆ. ಕೋವಿಡ್ ನಿಯಮ ಪಾಲಿಸಿ ಪರೀಕ್ಷೆಗಳು ನಡೆಯಲಿವೆ. ಕೋವಿಡ್ ಬಂದಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದರು.
- ಕೆಯುಡಬ್ಲೂೃಜೆ ವಾರ್ಷಿಕ ಪ್ರಶಸ್ತಿಗಳ ಪ್ರಕಟ
- ಸಂಕ್ರಾಂತಿ….
- ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ
- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ
- ರೈತರ ಕ್ರಾಂತಿ ಸಂಕ್ರಾಂತಿ
More Stories
ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ
ರಾಜ್ಯದಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ನಿಶ್ಚಿತ