ಪ್ರಶಾಂತ್ ಮಾಡಾಳ್ ಸೇರಿ ಐವರು 14 ದಿನ ನ್ಯಾಯಾಂಗ ಬಂಧನಕ್ಕೆ

Team Newsnap
1 Min Read
Five people including Prashant Madal sent to judicial custody for 14 days ಪ್ರಶಾಂತ್ ಮಾಡಾಳ್ ಸೇರಿ ಐವರು 14 ದಿನ ನ್ಯಾಯಾಂಗ ಬಂಧನಕ್ಕೆ

ಸುಮಾರು 40 ಲಕ್ಷ ರೂ. ಲಂಚ ಸ್ವೀರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಬೆಂಗಳೂರು ಜಲಮಂಡಳಿಯ (ಬಿಡ್ಲೂಎಸ್’ಎಸ್’ಬಿ) ಮುಖ್ಯ ಲೆಕ್ಕಾಧಿಕಾರಿ ಪ್ರಶಾಂತ್ ಮಡಾಳ್ ಅವರನ್ನು ನ್ಯಾಯಾಲಯ 14 ದಿನ ನ್ಯಾಯಾಂಗಕ್ಕೆ ಒಪ್ಪಿಸಿದೆ.

ಬಂಧಿತ ಪ್ರಶಾಂತ್ ಮಾಡಾಳ್ ಹಾಗೂ ಅವರ ಸಂಬಂಧಿ ಸಿದ್ದೇಶ್, ಸುರೇಂದ್ರ (ಅಕೌಂಟೆಂಟ್), ನಿಕೋಲಸ್, ಗಂಗಾಧರ್ (ದುಡ್ಡು ಕೊಡಲು ಬಂದವರು)ಸೇರಿ ಐವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ನಗರದ ಲೋಕಾಯುಕ್ತ ಕೋರ್ಟ್ ಆದೇಶ ಹೊರಡಿಸಿದೆ.

ನಗರದ ಕ್ರೆಸೆಂಟ್ ರಸ್ತೆಯಲ್ಲಿರುವ ಕಚೇರಿಯಲ್ಲಿ ನಿನ್ನೆ ರಾತ್ರಿ 40 ಲಕ್ಷ ರೂ ನಗದು ಲಂಚ ತೆಗೆದುಕೊಳ್ಳುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪ್ರಶಾಂತ್’ರನ್ನು ಬಂಧಿಸಿದ್ದರು.

ಇಂದು ಬೆಳಿಗ್ಗೆ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು.

ನ್ಯಾಯಾಲಯವು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಇನ್ನೂ ದಾಳಿ ಬಾಕಿ ಇರುವ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖಾ ಹಂತ ಪೂರ್ಣಗೊಂಡ ನಂತರ ಲೋಕಾಯುಕ್ತ ಅಧಿಕಾರಿಗಳು ತಮ್ಮ ವಶಕ್ಕೆ ಕೇಳುವ ಸಾಧ್ಯತೆಗಳಿವೆ.ಮಾ.12 ಕ್ಕೆ ಬೆಂಗಳೂರು – ಮೈಸೂರು ಏಕ್ಸಪ್ರೆಸ್ ಹೆದ್ದಾರಿಯ ಉದ್ಘಾಟನೆ – ಪ್ರಹ್ಲಾದ್ ಜೋಶಿ

Share This Article
Leave a comment