ಕಾಬೂಲ್ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮೇಲೆ ಸೋಮವಾರ 5 ರಾಕೆಟ್ ದಾಳಿ ನಡೆಸಲಾಗಿದೆ. ಈ ಘಟನೆಯಲ್ಲಿನ ಸಾವು ನೋವು ಗಳ ಬಗ್ಗೆ ವರದಿಗಳು ಬಂದಿಲ್ಲ.
ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲಾದ ವಾಯು ರಕ್ಷಣಾ ವ್ಯವಸ್ಥೆ ಈ ರಾಕೆಟ್‍ಗಳನ್ನು ಹಿಮ್ಮೆಟಿಸಿವೆ.
ಸೋಮವಾರ ಬೆಳಗ್ಗೆ 6.40 ರ ಸುಮಾರಿಗೆ ಕಾಬೂಲ್‍ನ ಸಲೀಂ ಕರ್ವಾನ್ ಬಳಿ ರಾಕೆಟ್ ದಾಳಿ ನಡೆಸಲಾಗಿದೆ. ಜೊತೆಗೆ ಗುಂಡಿನ ದಾಳಿ ಕೂಡ ನಡೆಸಲಾಗಿದೆ.
ಆದರೆ ಘಟನೆ ವೇಳೆ ಗುಂಡು ಹಾರಿಸಿದವರು ಯಾರು ಎಂಬುದರ ಬಗ್ಗೆ ಪತ್ತೆಯಾಗಿಲ್ಲ. ಅಲ್ಲದೇ 3 ಬಾರಿ ಸ್ಫೋಟಗೊಂಡ ಶಬ್ಧ ಮತ್ತು ಆಕಾಶದಲ್ಲಿ ಏನೋ ಮಿಂಚಿದಂತೆ ಕಂಡಿದೆ. ಈ ಸ್ಫೋಟಗಳ ನಂತರ ಜನರು ಸ್ಥಳ ತೊರೆದು ಹೋಗುತ್ತಿದ್ದಾರೆಂದು ಹೇಳಲಾಗಿದೆ.
ಅಮೇರಿಕಾ ಅಧ್ಯಕ್ಷ ಜೋ ಬೈಡೆನ್ ಭಯೋತ್ಪಾದಕರಿಗೆ ದಾಳಿ ನಡೆಸುವ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ, ಸ್ಫೋಟಕ ತುಂಬಿದ ವಾಹನವನ್ನು ಧ್ವಂಸಗೊಳಿಸಿದ ಬಳಿಕ ಇದೀಗ ಮತ್ತೆ ಈ ಘಟನೆ ನಡೆದಿದೆ.
- ತಿರುಪತಿ ದೇವಾಲಯದಲ್ಲಿ ಬೆಂಕಿ ಅವಘಡ: ಲಡ್ಡು ವಿತರಣಾ ಕೌಂಟರ್ನಲ್ಲಿ ಶಾರ್ಟ್ ಸರ್ಕ್ಯೂಟ್
- ರಾಜ್ಯದಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ನಿಶ್ಚಿತ
- ರಸ್ತೆ ಅಪಘಾತ ಸಂತ್ರಸ್ತರಿಗೆ ನೆರವಾದವರಿಗೆ ₹25,000 ಬಹುಮಾನ: ಕೇಂದ್ರ ಸರ್ಕಾರ
- ರಾಜ್ಯದ ಈ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ
- ಪಾಸ್ಪೋರ್ಟ್ ಸೇವೆ ವಿಸ್ತರಣೆ: ಕೇಂದ್ರ ಸರ್ಕಾರದಿಂದ ಸಿಹಿಸುದ್ದಿ
More Stories
KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ