ಮೊಬೈಲ್‍ಗೆ ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್ -ತುರ್ತು ಎಚ್ಚರಿಕೆ ವ್ಯವಸ್ಥೆ

Team Newsnap
2 Min Read

ಮುಂಬರುವ ದಿನಗಳಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಮೊಬೈಲ್‍ಗೆ ಇದೀಗ ಎಚ್ಚರಿಕೆ ರೀತಿಯ ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಸಂದೇಶವೊಂದು ಬಂದಿದೆ.

ಈ ಮೊದಲು ಕಳುಹಿಸಲಾಗಿದ್ದ ಸಂದೇಶದಲ್ಲಿ ಫೋನ್ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್ ಶಬ್ಧದೊಂದಿಗೆ ಸಂದೇಶ ಫ್ಲ್ಯಾಶ್ ಆಗಲಿದೆ. ಬಳಕೆದಾರರು ಓಕೆ ಕೊಡುವವರೆಗೂ ಈ ಶಬ್ಧ ಬರುತ್ತಲೇ ಇರುತ್ತದೆ. ಈ ಮೂಲಕ ಎಚ್ಚರಿಕೆ ಸಂದೇಶವನ್ನು ಓದಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಆದರೆ ಇದಕ್ಕೆ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಹೇಳಲಾಗಿತ್ತು.

ಅಲರ್ಟ್ ಸಂದೇಶದಲ್ಲಿ ಏನಿದೆ?

ಇದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್‌ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ ಸಂದೇಶವಾಗಿದೆ. ನಿಮ್ಮ ಕಡೆಯಿಂದ ಯಾವುದೇ ಕ್ರಿಯೆಯ ಅಗತ್ಯವಿಲ್ಲದ ಕಾರಣ ದಯವಿಟ್ಟು ಈ ಸಂದೇಶವನ್ನು ನಿರ್ಲಕ್ಷಿಸಿ. ಈ ಸಂದೇಶವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅನುಷ್ಠಾನಗೊಳಿಸುತ್ತಿರುವ ಪ್ಯಾನ್-ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಗೆ ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ತುರ್ತು ಸಂದರ್ಭಗಳಲ್ಲಿ ಸಮಯೋಚಿತ ಎಚ್ಚರಿಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಬಳಕೆದಾರರಿಗೆ ಕಳುಹಿಸಲಾದ ಫ್ಲ್ಯಾಶ್ ಸಂದೇಶದಲ್ಲಿ ಬರೆಯಲಾಗಿದೆ.

ಭಾರತದಲ್ಲಿನ ಸ್ಮಾರ್ಟ್‌ಫೋನ್ ಬಳಕೆದಾರರು ಜುಲೈ 20, ಆಗಸ್ಟ್ 17 ಮತ್ತು ಸೆಪ್ಟೆಂಬರ್ 15 ರಂದು ಇದೇ ರೀತಿಯ ಪರೀಕ್ಷಾ ಎಚ್ಚರಿಕೆಗಳನ್ನು ಸ್ವೀಕರಿಸಿದ್ದಾರೆ. ಜನರ ಫೋನ್‌ಗಳಲ್ಲಿ ಫ್ಲ್ಯಾಸ್ ನೋಟಿಫಿಕೇಷನ್, ಪ್ರವಾಹ ಅಥವಾ ಭೂಕುಸಿತದಂತಹ ತುರ್ತು ಸಮಯದಲ್ಲಿ ಜನರನ್ನು ಎಚ್ಚರಿಸಲು ಸರ್ಕಾರವು ವಿನ್ಯಾಸಗೊಳಿಸಿದ ವ್ಯವಸ್ಥೆಯ ಭಾಗವಾಗಿದೆ.ಕರ್ನಾಟಕಕ್ಕೆ ಮತ್ತೆ ಬರೆ : ತ. ನಾಡಿಗೆ 15 ದಿನ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಬಿಡಿ – CWRC ಸೂಚನೆ

ಈ ರೀತಿಯ ಸಂದೇಶವನ್ನು ಪ್ರಯೋಗದ ಭಾಗವಾಗಿ ಕಳುಹಿಸಿದ್ದರಿಂದ ಭಯ ಪಡಬೇಕಾದ್ದ ಅಗತ್ಯವಿಲ್ಲ. ಜನರನ್ನು ಎಚ್ಚರಿಸುವ ವ್ಯವಸ್ಥೆಯನ್ನು ಪರೀಕ್ಷಿಸಲಾಗುತ್ತಿದ್ದು, ಅದರ ಭಾಗವಾಗಿಯೇ ಈ ಅಲರ್ಟ್ ಸಂದೇಶಗಳನ್ನು ಕಳುಹಿಸಲಾಗುತ್ತಿದೆ. ಒಂದೊಮ್ಮೆ ಈ ವ್ಯವಸ್ಥೆ ಸಂಪೂರ್ಣವಾಗಿ ಚಾಲನೆಗೊಳಗಾಗದರೆ, ತುರ್ತು ಸಂದರ್ಭಗಳಲ್ಲಿ ನಾಗರಿಕರನ್ನು ಎಚ್ಚರಿಸಲು ಈ ಸರ್ಕಾರವು ಈ ವ್ಯವಸ್ಥೆಯನ್ನು ಬಳಸಿಕೊಳ್ಳುತ್ತದೆ. ವಿಶೇಷವಾಗಿ ನೈಸರ್ಗಿಕ ವಿಕೋಪ ಸಂದರ್ಭಗಳಲ್ಲಿ ಈ ಅಲರ್ಟ್ ಸಿಸ್ಟಮ್ ಹೆಚ್ಚು ಪ್ರಯೋಜನಕಾರಿಯಾಗಿರಲಿದೆ.

Share This Article
Leave a comment