ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು , ಪ್ರವಾಹದಿಂದ ಎರಡು ರಾಜ್ಯಗಳಿಂದ ಸೇರಿ 27 ಜನ ಸಾವಿಗೀಡಾಗಿದ್ದಾರೆ.
ಸತ್ತವರ ಪೈಕಿ 12 ಮಂದಿ ಆಂಧ್ರಪ್ರದೇಶದವರಾಗಿದ್ದು, 15 ಮಂದಿ ತೆಲಂಗಾಣದವರಾಗಿದ್ದಾರೆ.ಮಳೆಯ ಅಬ್ಬರಕ್ಕೆ ರಸ್ತೆಗಳು ಜಲಾವೃತಗೊಂಡಿದ್ದು ಕೆಲವೆಡೆ ಸಂಪೂರ್ಣ ಸಂಪರ್ಕ ಕಡಿತಗೊಂಡಿದೆ.
97 ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದ್ದು,ಅಲ್ಲದೇ 140 ರೈಲುಗಳು ರದ್ದುಪಡಿಸಲಾಗಿದೆ.
ರೈಲ್ವೆ ನಿಲ್ದಾಣಗಳಲ್ಲಿ 6,000 ಪ್ರಯಾಣಿಕರು ಸಿಲುಕಿಕೊಂಡಿದ್ದು ,ಹಲವೆಡೆ ರಕ್ಷಣಾ ಕಾರ್ಯಾಚರಣೆಗಳಿಗೂ ಸಮಸ್ಯೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರೀ ಮಳೆಯಿಂದಾಗಿ ವಿಜಯವಾಡ ಬುಡಮೇರು ವಾಗು ನದಿ ಸೇರಿದಂತೆ ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ಈ ನದಿ ಸಮೀಪದ ಪ್ರದೇಶಗಳ ಸುಮಾರು 17,000ಕ್ಕೂ ಹೆಚ್ಚು ಜನರನ್ನು ರಕ್ಷಣಾ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಇನ್ನೂ ತೀವ್ರ ಪ್ರವಾಹವನ್ನು ಅನುಭವಿಸಿದ ವಿಜಯವಾಡ ಒಂದರಲ್ಲೇ 2.76 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ.ಮುಡಾ ಹಗರಣ : ಸಿಎಂ ವಿರುದ್ಧ ದೂರು ನೀಡಿದ್ದ RTI ಕಾರ್ಯಕರ್ತನಿಗೆ ಜೀವ ಬೆದರಿಕೆ
ಸೆ.2 ರಿಂದ 5 ರವರೆಗೆ ನಾಲ್ಕು ದಿನಗಳ ಕಾಲ ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಮಿಂಚು ಸಹಿತ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದು ಮತ್ತಷ್ಟು ಆತಂಕ ಸೃಷ್ಟಿಸಿದೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ