May 29, 2022

Newsnap Kannada

The World at your finger tips!

WhatsApp Image 2022 04 24 at 11.02.31 AM

ವಿದ್ಯುತ್ ಶಾರ್ಟ್ ಸರ್ಕ್ಯೂಟ್‍ನಿಂದಾಗಿ ಫ್ಲವರ್ ಡೆಕೊರೇಷನ್ ಗೋದಾಮಿಗೆ ಬೆಂಕಿ.

Spread the love

ವಿದ್ಯುತ್ ಶಾರ್ಟ್ ಸರ್ಕ್ಯೂಟ್‍ನಿಂದಾಗಿ ಫ್ಲವರ್ ಡೆಕೊರೇಷನ್ ಗೋದಾಮಿಗೆ ಬೆಂಕಿ ಹೊತ್ತಿಕೊಂಡು 20 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ಬಳಿ ನಡೆದಿದೆ.

ಕುಮಾರ್ ಎಂಬವರಿಗೆ ಸೇರಿದ ಫ್ಲವರ್ ಡೆಕೊರೇಷನ್ ಗೋದಾಮಿಗೆ ಶನಿವಾರ ತಡರಾತ್ರಿ ಬೆಂಕಿ ಬಿದ್ದಿದೆ.

ಫೈಬರ್ ಹಾಗೂ ಪ್ಲಾಸ್ಟಿಕ್ ವಸ್ತುಗಳು ಹೆಚ್ಚಾಗಿದ್ದರಿಂದ ಬೆಂಕಿಯ ಕೆನ್ನಾಲಿಗೆ ಕ್ಷಣಾರ್ಧದಲ್ಲಿ ಇಡೀ ಗೋದಾಮಿಗೆ ಆವರಿಸಿಕೊಂಡಿದೆ.

ಇದೇ ಗೋದಾಮಿನ ಪಕ್ಕದಲ್ಲಿ ಸ್ಕ್ರಾಪ್ ಗೋದಾಮು ಇದ್ದವು. ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಆನೇಕಲ್ ಪಟ್ಟಣದ ಅಗ್ನಿಶಾಮಕ ಠಾಣೆಯ ಎರಡು ವಾಹನಗಳು ಹಾಗೂ ಸಿಬ್ಬಂದಿ 3 ಗಂಟೆಗೂ ಹೆಚ್ಚು ಕಾಲ ನಿರಂತರ ಕಾರ್ಯಾಚರಣೆ ನಡೆಸಿ ಬೆಂಕಿಯ ಕೆನ್ನಾಲಿಗೆ ಹತೋಟಿಗೆ ತಂದಿದ್ದಾರೆ.

ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಠಾಣೆಯ ಸಿಬ್ಬಂದಿಗೆ ಸ್ಥಳೀಯರು ಕೂಡ ಸಹಕಾರ ನೀಡಿದರು. ಘಟನೆ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!