ಇಂಡೋನೇಷ್ಯಾದಲ್ಲಿ ಫುಟ್‌ಬಾಲ್ ಪಂದ್ಯದ ವೇಳೆ ಕಾಲ್ತುಳಿತ: 127 ಸಾವು, 180 ಜನರಿಗೆ ಗಾಯ

Team Newsnap
1 Min Read

ಇಂಡೋನೇಷ್ಯಾದ ಪೂರ್ವ ಜಾವಾ ಪ್ರಾಂತ್ಯದಲ್ಲಿ ನಡೆದ ಫುಟ್‌ಬಾಲ್ ಪಂದ್ಯವೊಂದರಲ್ಲಿ ಪ್ರೇಕ್ಷಕರ ನೂಕುನುಗ್ಗಲು, ಕಾಲ್ತುಳಿತಕ್ಕೆ 127 ಜನರು ಸಾವನ್ನಪ್ಪಿದ್ದಾರೆ ಮತ್ತು 180 ಜನರು ಗಾಯಗೊಂಡಿದ್ದಾರೆ.

ಅರೆಮಾ ಎಫ್‌ಸಿ ಮತ್ತು ಪರ್ಸೆಬಯಾ ಸುರಬಯಾ ನಡುವಿನ ಪಂದ್ಯ ಮುಗಿದ ನಂತರ, ಸೋತ ತಂಡದ ಅಭಿಮಾನಿಗಳು ಕ್ರೀಡಾಂಗಣಕ್ಕೆ ನುಗ್ಗಿದ್ದಾರೆ.

ಅಭಿಮಾನಿಗಳು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಇದರಿಂದ ನೂಕುನುಗ್ಗಲು, ಕಾಲ್ತುಳಿತ ಉಂಟಾಗಿದ್ದು, 127 ಜನರ ಸಾವಿಗೆ ಕಾರಣವಾಗಿದೆ. ಮೈಸೂರು- ಬೆಂಗಳೂರು ಹೈವೇನಲ್ಲಿ ಹೆದ್ದಾರಿ ಗಸ್ತು ಸಿಬ್ಬಂದಿ ನಿಯೋಜನೆ: ಸಂಸದ ಪ್ರತಾಪ್ ಸಿಂಹ

ಘಟನಾ ಸ್ಥಳದಲ್ಲೇ ಇಬ್ಬರು ಪೊಲೀಸರು, 36 ಮಂದಿ ಸಾವನ್ನಪ್ಪಿದರೆ, ಉಳಿದವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೂರ್ವ ಜಾವಾ ಪೊಲೀಸ್ ಮುಖ್ಯಸ್ಥ ನಿಕೊ ಅಫಿಂಟಾ ತಿಳಿಸಿದ್ದಾರೆ.

Share This Article
Leave a comment