ವಿದೇಶದಿಂದ ಬರುವ ಪ್ರಯಾಣಿಕರಿಗೆ ಕೊರೊನಾ ನೆಗೆಟಿವ್ ಬಂದರೂ ಕ್ವಾರಂಟೈನ್ ಇರುತ್ತೆ: ಸುಧಾಕರ್

Team Newsnap
1 Min Read
Siddu will not win in Kolar : Minister Sudhakarಸಿದ್ದು ಕೋಲಾರದಲ್ಲಿ ಗೆಲ್ಲುವುದಿಲ್ಲ - ಖೆಡ್ಡಾಗೆ ಬಿದ್ದಿದ್ದಾರೆ: ಸಚಿವ ಸುಧಾಕರ್‌

ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ವೈರಸ್‍ನ ಹೊಸ ರೂಪಾಂತರಿ ತಳಿ ಒಮಿಕ್ರಾನ್ ಪತ್ತೆಯಾಗಿದೆ ಈ ಹಿನ್ನೆಲೆಯಲ್ಲಿ ವಿದೇಶದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಕೊರೊನಾ ನೆಗಟಿವ್ ಬಂದರೂ ಒಂದು ವಾರ ಕ್ವಾರಂಟೈನ್‍ನಲ್ಲಿರಿಸಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಕೆಲ ರಾಷ್ಟ್ರಗಳಲ್ಲಿ ಕಾಣಿಸಿಕೊಂಡಿರುವ ಬೊಟ್ಸ್ ವಾನಾ ಹೊಸ ರೂಪಾಂತರಿ ತಳಿಯ ಬಗ್ಗೆ ಕುರಿತು ಮಾತನಾಡಿದ ಡಾ ಸುಧಾಕರ್ ಒಂದು ವಾರದಿಂದ ದಕ್ಷಿಣ ಆಫ್ರಿಕಾ, ಇಸ್ರೆಲ್, ಹಾಂಕಾಂಗ್ ನಲ್ಲಿ ಹೊಸ ತಳಿ ಪತ್ತೆಯಾಗಿದೆ. 9 ತಿಂಗಳಿಂದ ಡೆಲ್ಟಾ ಬಿಟ್ಟು ರೂಪಂತಾರಗೊಂಡ ವೈರಸ್ ಕಂಡು ಬಂದಿರಲಿಲ್ಲ. ಇದೀಗ ಕೊರೊನಾ ಹೊಸ ರೂಪಾಂತರಿ ತಳಿಗೆ ಒಮಿಕ್ರಾನ್ ಎಂದು ನಾಮಕರಣ ಮಾಡಿದ್ದಾರೆ ಎಂದರು.

ಸಮುದಾಯಕ್ಕೆ ಬಂದರೆ ಈ ವೈರಸ್ ವೇಗವಾಗಿ ಹರಡುತ್ತದೆ ಎಂಬ ಮಾಹಿತಿ ಇದೆ. ಜಿನೋಮಿಕ್ ಸಿಕ್ವೆನ್ಸಿಂಗ್ ಮಾಡಿ, ಹರಡುವ ತೀವ್ರತೆ ಬಗ್ಗೆ ಪರೀಕ್ಷೆ ನಡೆಸಲಾಗುತ್ತಿದೆ. ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಏರ್ ಪೋರ್ಟ್‌ಗಳಲ್ಲಿ ಕೂಡ ಟೆಸ್ಟ್ ಮಾಡಲಾಗುತ್ತಿದೆ. ನೆಗಟಿವ್ ಬರುವ ತನಕ ಹೊರಗಡೆ ಬರುವ ಹಾಗಿಲ್ಲ. ಈಗಾಗಲೇ ಮಾರ್ಗ ಸೂಚಿ ಪ್ರಕಟ ಮಾಡಿದ್ದೇವೆ. ನೆಗಟಿವ್ ಬಂದ ಮೇಲೂ ಒಂದು ವಾರ ಕ್ವಾರಂಟೈನ್‍ನಲ್ಲಿರಬೇಕೆಂದು ಸೂಚಿಸಿದ್ದೇವೆ ಎಂದು ಹೇಳಿದರು.

Share This Article
Leave a comment