ವಿದೇಶಿ ಗಣ್ಯರಿಗೆ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ

Team Newsnap
1 Min Read

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಶ್ರೀಲಂಕಾ, ಬಾಂಗ್ಲಾದೇಶ ಸೇರಿದಂತೆ ಹಲವು ನೆರೆಯ ರಾಷ್ಟ್ರಗಳ ನಾಯಕರನ್ನು ಆಹ್ವಾನಿಸುವ ಸಾಧ್ಯತೆ ಇದೆ.

ಭಾರತೀಯ ಜನತಾ ಪಾರ್ಟಿ ಲೋಕಸಭೆ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತಕ ಒಕ್ಕೂಟ (NDA) 293 ಸ್ಥಾನಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲು ಮೋದಿ ಸಜ್ಜಾಗಿದ್ದಾರೆ.

ವಿದೇಶಿ ನಾಯಕರಲ್ಲಿ ಬಾಂಗ್ಲಾದೇಶ, ಶ್ರೀಲಂಕಾ, ಭೂತಾನ್‌, ನೇಪಾಳ ಮತ್ತು ಮಾರಿಷಸ್‌‍ನ ಪ್ರಮುಖ ನಾಯಕರನ್ನು ಮೋದಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಲಾಗುವುದು.

ಪ್ರಧಾನ ಮಂತ್ರಿ ಮೋದಿ ಅವರು ತಮ ಪ್ರಮಾಣವಚನ ಸಮಾರಂಭಕ್ಕೆ ಅಧ್ಯಕ್ಷ ವಿಕ್ರಮಸಿಂಘೆ ಅವರನ್ನು ಆಹ್ವಾನಿಸಿದರು ಎಂದು ತಿಳಿದುಬಂದಿದ್ದು ,ಅವರು ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು ಮತ್ತು ಅವರು ತಮ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಿದರು ಎಂದು ತಿಳಿದುಬಂದಿದೆ.

ನೇಪಾಳದ ಪ್ರಧಾನಿ ಪುಷ್ಪ ಕಮಲ್‌ ದಹಲ್‌ ಪ್ರಚಂಡ, ಭೂತಾನ್‌ ಪ್ರಧಾನಿ ತ್ಶೆರಿಂಗ್‌ ತೊಬ್ಗೇ ಮತ್ತು ಮಾರಿಷಸ್‌‍ ಪ್ರಧಾನಿ ಪ್ರವಿಂದ್‌ ಜುಗ್ನಾಥ್‌ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ.

Share This Article
Leave a comment