ಬೆಂಗಳೂರು : ನಗರದ ಶೇಷಾದ್ರಿಪುರಂನಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಜರೀನಾ (37) ಎಂಬ ಉಜ್ಬೇಕಿಸ್ತಾನ್ ( Uzbekistan ) ಮಹಿಳೆ ಶವವಾಗಿ ಪತ್ತೆಯಾಗಿದ್ದಾರೆ.
ನಾಲ್ಕು ದಿನಗಳ ಹಿಂದೆ ಪ್ರವಾಸಿ ವೀಸಾದಲ್ಲಿ ಬೆಂಗಳೂರಿಗೆ ಬಂದಿದ್ದ ಜರೀನಾ ಖಾಸಗಿ ಹೋಟೆಲ್‌ನಲ್ಲಿ ರೂಂ ಬುಕ್ ಮಾಡಿದ್ದಾರೆ.
ರೂಮಿನಿಂದ ಹೊರಬರದೇ ಇರುವುದನ್ನು ಹೋಟೆಲ್ ಸಿಬ್ಬಂದಿ ಗಮನಿಸಿ ಬುಧವಾರ ಸಂಜೆ 4.30 ರ ಸುಮಾರಿಗೆ ಎರಡನೇ ಮಹಡಿಯಲ್ಲಿರುವ ಜರೀನಾ ಅವರಿದ್ದ ಕೊಠಡಿ ಬಾಗಿಲು ಬಡಿದಿದ್ದಾರೆ.
ಯಾವುದೇ ಪ್ರತಿಕ್ರಿಯೆ ಸಿಗದಿದ್ದರಿಂದ ಮಾಸ್ಟರ್ ಕೀ ಮೂಲಕ ಡೋರ್ ಅನ್ಲಾಕ್ ಮಾಡಲಾದ್ದು ,ಈ ವೇಳೆ ಜರೀನಾ ಶವವಾಗಿ ಪತ್ತೆಯಾಗಿದ್ದಾರೆ.
ಹೋಟೆಲ್ ಮ್ಯಾನೇಜರ್ ಕೂಡಲೇ ದೂರು ದಾಖಲಿಸಿದ್ದು, ಪೊಲೀಸರು ನಿಗೂಢ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಾಥಮಿಕ ಸಾಕ್ಷ್ಯವು ಕೊಲೆ ಎಂದು ಸೂಚಿಸಿದ್ದು ,ಜರೀನಾ ಅವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.ನಾಳೆ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ
ಹೋಟೆಲ್‌ಗೆ ಫೋರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿ ತಂಡವು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ,ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ