ರಾಜ್ಯದ ಮದರಸಾಗಳ ಶಿಕ್ಷಣದ ಚಟುವಟಿಕೆಗಳ ಮೇಲೆ ನಿಗಾವಹಿಸಲು ಸರ್ಕಾರ ನಿರ್ಧಾರ ಮಾಡಿದೆ
ಮದರಸಾಗಳ ಶಿಕ್ಷಣ ವ್ಯವಸ್ಥೆಗಾಗಿ ವಿಶೇಷ ಮಂಡಳಿ ರಚನೆಗೆ ನಿರ್ಧರಿಸಲಾಗಿದೆ, ಶಿಕ್ಷಣ ಸಚಿವ ನಾಗೇಶ್ ನೇತೃತ್ವದಲ್ಲಿ ನಿನ್ನೆ ಸಭೆ ನಡೆದಿದೆ. ಸಂಪೂರ್ಣ ಮದರಸಗಳ ಮಾಹಿತಿ ಪಡೆಯಲು ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ.
ರಾಜ್ಯದ ಮದರಸಾಗಳ ಕುರಿತು 15 ದಿನಗಳಲ್ಲಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಅಧಿಕಾರಿಗಳ ವರದಿ ಬಳಿಕ ಮುಂದಿನ ತೀರ್ಮಾನ ಮಾಡಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ.
ಮದರಸಾ ಶಿಕ್ಷಣದ ಬಗ್ಗೆ ಕರ್ನಾಟಕ ದಲ್ಲಿ ದೊಡ್ಡ ಮಟ್ಟದಲ್ಲಿ ಹಿಂದೂಸಂಘಟನೆಗಳು ಕೆಲ ಕಮಲ ನಾಯಕರು ಸಿಡಿದೆದ್ದಿದ್ದರು. ಮದರಸಾದಲ್ಲಿ ಭಯೋತ್ಪಾದನೆಯ ಪಾಠ ಹೇಳಲಾಗುತ್ತಿದೆ. ಇಸ್ಲಾಂ ಮೂಲಭೂತವಾದ ಕಲಿಸಿಕೊಡಲಾಗುತ್ತದೆ. ಅಂಕುಶ ಹಾಕಿ ಇಲ್ಲವೇ ಬ್ಯಾನ್ ಮಾಡಿ ಎನ್ನುವ ಕೂಗು ದೊಡ್ಡದಾಗಿ ಕೇಳಿಬಂದಿತ್ತು. ಬಿಜೆಪಿ ಮುಖಂಡ ಸಿಟಿ ರವಿ ಟ್ವೀಟ್ ಮಾಡಿ ಮದರಸಾ ಶಿಕ್ಷಣದ ಬಗ್ಗೆ ಬಹಿರಂಗ ಆಕ್ಷೇಪ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿ 900 ಮದರಸಾಗಳು ವಕ್ಫ್ ಬೋರ್ಡ್ ಅಡಿ ನೋಂದಣಿಯಾಗಿವೆ ಪ್ರತಿ ವರ್ಷ 10 ಲಕ್ಷ ರೂ. ಅನುದಾನ ನೀಡಲಾಗುತ್ತಿದೆ. ಈ ಅನುದಾನ ಸಮರ್ಪಕವಾಗಿ ಬಳಕೆ ಆಗುತ್ತಿಲ್ಲ. ಮದರಸಾಗಳಲ್ಲಿ ಶಿಕ್ಷಣದ ಬದಲಾಗಿ ಧರ್ಮ ಬೋಧನೆಯ ಕೆಲಸ ಆಗುತ್ತಿದೆ ಎಂಬ ಆರೋಪ ಬಂದಿದೆ.
ಸೈಬರ್ ವಂಚನೆಗೆ ಬ್ರೇಕ್ ಗಾಗಿ ಶೀಘ್ರವೇ ‘ಸೈಬರ್ ಪಾಲಿಸಿ’ ಜಾರಿಗೆ ಚಿಂತನೆ
ಅಷ್ಟೇ ಅಲ್ಲದೇ ರಾಷ್ಟ್ರಗೀತೆ, ರಾಷ್ಟ್ರ ಭಾವೈಕ್ಯತೆಯ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಮದರಸಾಗಳಲ್ಲಿ ಕಲಿಯೋ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಕಂಪ್ಯೂಟರ್ ತರಬೇತಿ, ವಿಜ್ಞಾನದ ಲ್ಯಾಬ್ ಗಳು, ನೈತಿಕ ಶಿಕ್ಷಣದಂತಹ ಶೈಕ್ಷಣಿಕ ಚಟುವಟಿಕೆಗಳು ಸರಿಯಾಗಿ ನಡೆಯುತ್ತಿಲ್ಲ ಎಂಬ ಆರೋಪ ಹಿನ್ನೆಲೆಯಲ್ಲಿ ಮಂಡಳಿ ರಚನೆಗೆ ಸರ್ಕಾರ ಮುಂದಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು