Karnataka

ರಾಜ್ಯದ ಮದರಸಾಗಳಲ್ಲಿ ಧರ್ಮ ಬೋಧನೆ ತಡೆಗೆ ವಿಶೇಷ ಮಂಡಳಿ ರಚನೆ

ರಾಜ್ಯದ ಮದರಸಾಗಳ ಶಿಕ್ಷಣದ ಚಟುವಟಿಕೆಗಳ ಮೇಲೆ ನಿಗಾವಹಿಸಲು ಸರ್ಕಾರ ನಿರ್ಧಾರ ಮಾಡಿದೆ

ಮದರಸಾಗಳ ಶಿಕ್ಷಣ ವ್ಯವಸ್ಥೆಗಾಗಿ ವಿಶೇಷ ಮಂಡಳಿ ರಚನೆಗೆ ನಿರ್ಧರಿಸಲಾಗಿದೆ, ಶಿಕ್ಷಣ ಸಚಿವ ನಾಗೇಶ್‌ ನೇತೃತ್ವದಲ್ಲಿ ನಿನ್ನೆ ಸಭೆ ನಡೆದಿದೆ. ಸಂಪೂರ್ಣ ಮದರಸಗಳ ಮಾಹಿತಿ ಪಡೆಯಲು ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ.

ರಾಜ್ಯದ ಮದರಸಾಗಳ ಕುರಿತು 15 ದಿನಗಳಲ್ಲಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಅಧಿಕಾರಿಗಳ ವರದಿ ಬಳಿಕ ಮುಂದಿನ ತೀರ್ಮಾನ ಮಾಡಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ.

ಮದರಸಾ ಶಿಕ್ಷಣದ ಬಗ್ಗೆ ಕರ್ನಾಟಕ ದಲ್ಲಿ ದೊಡ್ಡ ಮಟ್ಟದಲ್ಲಿ ಹಿಂದೂಸಂಘಟನೆಗಳು ಕೆಲ ಕಮಲ ನಾಯಕರು ಸಿಡಿದೆದ್ದಿದ್ದರು. ಮದರಸಾದಲ್ಲಿ ಭಯೋತ್ಪಾದನೆಯ ಪಾಠ ಹೇಳಲಾಗುತ್ತಿದೆ. ಇಸ್ಲಾಂ ಮೂಲಭೂತವಾದ ಕಲಿಸಿಕೊಡಲಾಗುತ್ತದೆ. ಅಂಕುಶ ಹಾಕಿ ಇಲ್ಲವೇ ಬ್ಯಾನ್ ಮಾಡಿ ಎನ್ನುವ ಕೂಗು ದೊಡ್ಡದಾಗಿ ಕೇಳಿಬಂದಿತ್ತು. ಬಿಜೆಪಿ ಮುಖಂಡ ಸಿಟಿ ರವಿ ಟ್ವೀಟ್ ಮಾಡಿ ಮದರಸಾ ಶಿಕ್ಷಣದ ಬಗ್ಗೆ ಬಹಿರಂಗ ಆಕ್ಷೇಪ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ 900 ಮದರಸಾಗಳು ವಕ್ಫ್‌ ಬೋರ್ಡ್‌ ಅಡಿ ನೋಂದಣಿಯಾಗಿವೆ ಪ್ರತಿ ವರ್ಷ 10 ಲಕ್ಷ ರೂ. ಅನುದಾನ ನೀಡಲಾಗುತ್ತಿದೆ. ಈ ಅನುದಾನ ಸಮರ್ಪಕವಾಗಿ ಬಳಕೆ ಆಗುತ್ತಿಲ್ಲ. ಮದರಸಾಗಳಲ್ಲಿ ಶಿಕ್ಷಣದ ಬದಲಾಗಿ ಧರ್ಮ ಬೋಧನೆಯ ಕೆಲಸ ಆಗುತ್ತಿದೆ ಎಂಬ ಆರೋಪ ಬಂದಿದೆ.

ಸೈಬರ್ ವಂಚನೆಗೆ ಬ್ರೇಕ್ ಗಾಗಿ ಶೀಘ್ರವೇ ‘ಸೈಬರ್ ಪಾಲಿಸಿ’ ಜಾರಿಗೆ ಚಿಂತನೆ

ಅಷ್ಟೇ ಅಲ್ಲದೇ ರಾಷ್ಟ್ರಗೀತೆ, ರಾಷ್ಟ್ರ ಭಾವೈಕ್ಯತೆಯ ಕಾರ್ಯಕ್ರಮಗಳು‌ ನಡೆಯುತ್ತಿಲ್ಲ. ಮದರಸಾಗಳಲ್ಲಿ ಕಲಿಯೋ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಕಂಪ್ಯೂಟರ್ ತರಬೇತಿ, ವಿಜ್ಞಾನದ ಲ್ಯಾಬ್ ಗಳು, ನೈತಿಕ ಶಿಕ್ಷಣದಂತಹ ಶೈಕ್ಷಣಿಕ ಚಟುವಟಿಕೆಗಳು ಸರಿಯಾಗಿ ನಡೆಯುತ್ತಿಲ್ಲ ಎಂಬ ಆರೋಪ ಹಿನ್ನೆಲೆಯಲ್ಲಿ ಮಂಡಳಿ ರಚನೆಗೆ ಸರ್ಕಾರ ಮುಂದಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024