ಶೀಘ್ರದಲ್ಲೇ ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ರಚನೆ

Team Newsnap
1 Min Read

ಬೆಂಗಳೂರು : ಬಿಜೆಪಿಯ ಎನ್​​ಡಿಎ ಮೈತ್ರಿಕೂಟದಲ್ಲಿ ಜೆಡಿಎಸ್​ ಸೇರಿದ್ದು, ಜಂಟಿಯಾಗಿ ಲೋಕಸಭೆ ಚುನಾವಣೆಯನ್ನು ಎದುರಿಸಲು ಎರಡೂ ಪಕ್ಷಗಳು ಸಜ್ಜಾಗಿವೆ.

2-3 ತಿಂಗಳು ಲೋಕಸಭೆ ಚುನಾವಣೆಗೆ ಬಾಕಿ ಇದ್ದು, ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ವೇದಿಕೆ ಸಜ್ಜು ಮಾಡುತ್ತಿದೆ.

ಬಿಜೆಪಿ ಮತ್ತು ಜೆಡಿಎಸ್ 28 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಇಟ್ಟುಕೊಂಡು ಸಮನ್ವಯ ಸಮಿತಿ ರಚಿಸಲು ನಾಯಕರು ತಯಾರಿ ನಡೆಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​.ಡಿ.ಕುಮಾರಸ್ವಾಮಿ ಸೇರಿದಂತೆ ಬಿಜೆಪಿ , ಜೆಡಿಎಸ್​​ನ 10ಕ್ಕೂ ನಾಯಕರನ್ನು ಸೇರಿಸಿ ಸಮನ್ವಯ ಸಮಿತಿ ರಚನೆಯಾಗಲಿದೆ.

ರಾಜ್ಯದಲ್ಲಿ ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಸಮನ್ವಯ ಸಮಿತಿ ರಚನೆಯಾಗುತ್ತಿದ್ದು , ಸಮಿತಿ ಮೂಲಕ ಕಾರ್ಯಕರ್ತರು, ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಉಪಾಯ ಮಾಡಲಾಗುತ್ತಿದೆ.

ಹೆಚ್​ಡಿ ಕುಮಾರಸ್ವಾಮಿ ಅವರಿಗೆ ನಾಯಕರ ಮಾತುಕತೆ ವೇಳೆ ಬಿಜೆಪಿ ಹೈಕಮಾಂಡ್ ,ರಾಜ್ಯ ಎನ್‌ಡಿಎ ಸಂಚಾಲಕ ಹುದ್ದೆ ವಹಿಸಿಕೊಳ್ಳುವಂತೆ ಸಲಹೆ ನೀಡಿದ್ದರು.ತಲಾ 2,000 ರೂ. , ರಾಜ್ಯದ 34 ಲಕ್ಷ ರೈತರಿಗೆ ಬರಪರಿಹಾರ ನೀಡಲಾಗಿದೆ : ಸಿಎಂ ಸಿದ್ದರಾಮಯ್ಯ

ಶೀಘ್ರದಲ್ಲಿ ಬಿಜೆಪಿ-ಜೆಡಿಎಸ್​ ನಾಯಕರ ಸಮನ್ವಯ ಸಮಿತಿ ರಚನೆಯಾಗಲಿದೆ.

Share This Article
Leave a comment