ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆ ಜಾರಿಗೆ ಸಮಿತಿ ರಚನೆ – ಸರ್ಕಾರದ ಆದೇಶ

Team Newsnap
1 Min Read

ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ಸಮಿತಿ ರಚಿಸಲಾಗಿದೆ.

ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ 2006 ರ ಏಪ್ರಿಲ್ 1 ನಂತರ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಮನವಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಜಾರಿಯಲಿರುವ ಸರ್ಕಾರಿ ನೌಕರರ ನೂತನ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ದೇಶದ ಹಲವು ರಾಜ್ಯಗಳು, ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಈ ಹಿಂದೆ ಜಾರಿಯಲ್ಲಿದ್ದ ಹಳೆಯ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸಿರುತ್ತವೆ, ಅದೇ ರೀತಿ ಕರ್ನಾಟಕ ರಾಜ್ಯದಲ್ಲೂ ಸಹ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರುವಂತೆ ಸರ್ಕಾರವನ್ನು ಕೋರಿದ್ದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯನ್ನು ಪರಿಶೀಲಿಸಿದ ಸರ್ಕಾರವು ಈಗಾಗಲೇ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿದೆ.ಇದನ್ನು ಓದಿ –ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ; ಸಿಎಂ ಘೋಷಣೆ

Share This Article
Leave a comment