ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ.
ಜು.21 ರ ಸಂಜೆ 4 ಗಂಟೆಗೆ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಸಮಾರಂಭವನ್ನು ವಿಶ್ವವಿದ್ಯಾಲಯ ಮುಖ್ಯ ಆವರಣ, ಇರುವಕ್ಕಿಯಲ್ಲಿ ಆಯೋಜಿಸಲಾಗಿದೆ.
ಘಟಿಕೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ ತಿಳಿಸಿದರು.
ರಾಜ್ಯದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾದಿಪತಿಗಳಾದ ಥಾವರ್‍ಚಂದ್ ಗೆಹ್ಲೋಟ್ ಇವರ ಅಧ್ಯಕ್ಷತೆಯಲ್ಲಿ ಘಟಿಕೋತ್ಸವ ಸುಗ್ಗಿ ಸಂಭ್ರಮ ಜರುಗಲಿದ್ದು, ಪದವೀಧರರಿಗೆ ಪದವಿ ಪ್ರಧಾನ ಮಾಡುವರು.
ಕೃಷಿ ಸಚಿವರು ಎನ್.ಚಲುವರಾಯಸ್ವಾಮಿ ಗೌರವ ಉಪಸ್ಥಿತಿ ಇರಲಿದೆ. ಪದ್ಮವಿಭೂಷಣ ಪ್ರಶಸ್ತಿ ವಿಜೇತರು ಹಾಗೂ ರಾಜ್ಯಸಭಾ ಸದಸ್ಯರಾದ ಡಾ.ವೀರೇಂದ್ರ ಹೆಗ್ಗಡೆ ಅವರು 8ನೇ ಘಟಿಕೋತ್ಸವ ಭಾಷಣ ಮಾಡುವರು ಎಂದು ಕುಲಪತಿಗಳಾದ ಡಾ.ಆರ್.ಸಿ.ಜಗದೀಶ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು