ಬೆಂಗಳೂರು : ಈಗಾಗಲೇ ಬಿಜೆಪಿಗೆ ರಾಜೀನಾಮೆ ನೀಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ನ ಬಾವುಟ ನೀಡಿ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಗೆ ಬರ ಮಾಡಿಕೊಂಡರು.
ಈ ವೇಳೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಗದೀಶ್ ಶೆಟ್ಟರ್ ಜೊತೆ ಹಲವು ನಾಯಕರು ಬರುತ್ತಿದ್ದಾರೆ. ನಮ್ಮ ಪಕ್ಷದ ನೀತಿ ಒಪ್ಪಿಕೊಂಡು ಬರುತ್ತಿದ್ದಾರೆ. ಜಗದೀಶ್ ಶೆಟ್ಟರ್ ಸೇರ್ಪಡೆಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಗೆ ಶಕ್ತಿ ಬರಲಿದೆ. ಅವರು ಸರಳ ಸಜ್ಜನೀಯ ರಾಜಕಾರಣಿಯಾಗಿದ್ದಾರೆ.ಹೀಗಾಗಿ ಅವರನ್ನು ಪಕ್ಷಕ್ಕೆ ಸ್ವಾಗತ ಕೋರುತ್ತೇನೆ ಎಂದು ಹೇಳಿದ್ದಾರೆ.
ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ,ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಎಂ.ಬಿ.ಪಾಟೀಲ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ