ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಕಿರಿಯ ಸಹೋದರ ರಾಮೇಗೌಡ (64) ಕಳೆದ ರಾತ್ರಿ ವಿಧಿವಶರಾದರು.
ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಿಡ್ನಿವೈಫಲ್ಯದ ಸಮಸ್ಯೆಯಿಂದ ದಾಖಲಾಗಿದ್ದ ರಾಮೇಗೌಡ ಚಿಕಿತ್ಸೆಗಾಗಿ
ಕಳೆದ ಕೆಲವು ದಿನಗಳಿಂದಲೂ ಕಿಡ್ನಿವೈಫಲ್ಯದ ಸಮಸ್ಯೆಯಿಂದ ಬಳಲುತ್ತಿದ್ದ ರಾಮೇಗೌಡರು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಗುರುವಾರವಷ್ಟೇ ಮೈಸೂರಿಗೆ ತೆರಳಿದ್ದ ಸಿದ್ದರಾಮಯ್ಯ ಆಸ್ಪತ್ರೆಗೆ ತೆರಳಿ ತಮ್ಮ ಸಹೋದರನ ಆರೋಗ್ಯ ವಿಚಾರಿಸಿದ್ದರು.
ಶುಕ್ರವಾರ ರಾಮೇಗೌಡರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿತ್ತು. ಸಂಜೆ ಆರೋಗ್ಯ ಸಮಸ್ಯೆ ಉಲ್ಬಣಿಸುತ್ತಿದ್ದಂತೆ ಹೆಚ್ಚಿನ ನಿಗಾ ವಹಿಸಲಾಗಿತ್ತು. ಆದರೆ ಅಂತಿಮವಾಗಿ ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ ರಾಮೇಗೌಡರು ವಿಧಿವಶರಾಗಿದ್ದಾರೆ.
ಮೈಸೂರು ಜಿಲ್ಲೆಯ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಶನಿವಾರ ರಾಮೇಗೌಡರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ತದನಂತರ ಸ್ವಗ್ರಾಮದಲ್ಲಿಯೇ ಅಂತ್ಯಕ್ರಿಯೆ ನಡೆಸಲಾಗುವುದು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು