ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ

Team Newsnap
1 Min Read

ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು‌ ಬರಬೇಡಿ. ಈ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ನೀಡಿರುವ ಅಧಿಕ ಪ್ರಸಂಗತನದ ಹೇಳಿಕೆ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಉದ್ಧವ್‌ ಠಾಕ್ರೆಯವರೇ, ಇತ್ಯರ್ಥವಾಗಿರುವ ವಿಷಯವನ್ನು ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ ಎಂದು ‘ಬೆಳಗಾವಿ ನಮ್ಮದು’ ಎಂದು ಹ್ಯಾಷ್‌ ಟ್ಯಾಗ್‌ ಮೂಲಕ ಟ್ವಿಟ್ ಮಾಡಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿಯವರೇ, ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ’ ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿಯ ಉದ್ಧಟತನದ ಹೇಳಿಕೆಗೆ ರಾಜ್ಯದ ಮುಖ್ಯಮಂತ್ರಿ ಅಧಿಕೃತವಾಗಿ ತಕ್ಕ ಪ್ರತ್ಯುತ್ತರ ನೀಡಬೇಕು’ ಎಂದೂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Share This Article
Leave a comment