ಚಾಮುಂಡಿ ತಾಯಿಯ ದರ್ಶನ ಪಡೆದ ಮಾಜಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ

Team Newsnap
1 Min Read
Former CM Siddaramaiah's wife Parvathi visited Chamundi hills ಚಾಮುಂಡಿ ತಾಯಿಯ ದರ್ಶನ ಪಡೆದ ಮಾಜಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ

ನಾಡಹಬ್ಬ ಮೈಸೂರು ದಸರಾ ಹಿನ್ನೆಲೆಯಲ್ಲಿ ಭಾನುವಾರ ಮಾಜಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಚಾಮುಂಡಿ ತಾಯಿಯ ದರ್ಶನ ಪಡೆದರು.

ಅರ್ಧ ಗಂಟೆಗೂ ಹೆಚ್ಚು ಕಾಲ ದೇವಾಲಯದಲ್ಲಿ ಪ್ರಾರ್ಥನೆ ಮಾಡಿ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.ಜೀವ ಮೋಹಕಿಂತ ವಸ್ತು ಮೋಹವೇ? (ಬ್ಯಾಂಕರ್ಸ್ ಡೈರಿ)

ಚಾಮುಂಡಿ ತಾಯಿಯ ಪರಮ ಭಕ್ತೆಯಾಗಿರುವ ಪಾರ್ವತಿಯವರು ಪ್ರತಿ ವರ್ಷ ನವರಾತ್ರಿಯ ಒಂಬತ್ತು ದಿನಗಳ ಕಾಲ ತಾಯಿಯ ದರ್ಶನ ಪಡೆಯುತ್ತಾರೆ.
ನಾಡಹಬ್ಬ ದಸರಾಗೆ ಕ್ಷಣಗಣನೆ ಶುರುವಾಗಿದೆ. ಚಿನ್ನದ ಅಂಬಾರಿಯಲ್ಲಿ ಕೂರುವ ತಾಯಿ ಚಾಮುಂಡಿಯ ಉತ್ಸವ ಮೂರ್ತಿ ನೋಡಲು ಕೋಟ್ಯಂತರ ಜನ ಕಾಯುತ್ತಿದ್ದಾರೆ.

ದಸರಾದ ಪ್ರಮುಖ ಆಕರ್ಷಣೆಯಾದ ಚಾಮುಂಡಿ ತಾಯಿಯ ಉತ್ಸವ ಮೂರ್ತಿಯ ಸ್ವಚ್ಛತಾ ಕಾರ್ಯ ಚಾಮುಂಡಿ ಬೆಟ್ಟದಲ್ಲಿ ಶುರುವಾಗಿದೆ.

ದಸರಾ ಮುಗಿದ ಮೇಲೆ ಈ ಉತ್ಸವ ಮೂರ್ತಿ ಅರಮನೆ ಮಂಡಳಿಯ ಖಜಾನೆಯಲ್ಲಿ ಇರುತ್ತದೆ. ದಸರೆಗೆ ಎರಡು ದಿನ ಮುಂಚಿತವಾಗಿ ಚಾಮುಂಡಿ ಬೆಟ್ಟಕ್ಕೆ ಉತ್ಸವ ಮೂರ್ತಿ ತಂದು ಸ್ವಚ್ಛತಾ ಕಾರ್ಯ ನೆರವೇರಿಸಿ ಪೂಜೆ ಆರಂಭಿಸಲಾಗುತ್ತದೆ.

ನವರಾತ್ರಿಯ 9 ದಿನವೂ ಈ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ ಮೂರ್ತಿಗೆ ಶಕ್ತಿ ತುಂಬಲಾಗುತ್ತದೆ.

Share This Article
Leave a comment