June 5, 2023

Newsnap Kannada

The World at your finger tips!

politics,congress, retirement

My Desires Aspirations Retired: SM Krishna ನನ್ನ ಆಸೆ ಆಕಾಂಕ್ಷೆಗಳು ನಿವೃತ್ತವಾಗಿವೆ: ಎಸ್.ಎಂ.ಕೃಷ್ಣ

ಮಾಜಿ ಸಿಎಂ ಎಸ್.ಎಂ ಕೃಷ್ಣ ರಾಜಕೀಯ ನಿವೃತ್ತಿ ಪ್ರಕಟ

Spread the love

ಮಾಜಿ ಸಿಎಂ ಎಸ್.ಎಂ ಕೃಷ್ಣ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ಈ ಕುರಿತು ಮಾತನಾಡಿರುವ ಎಸ್ ಎಂ ಕೃಷ್ಣ ನಾನು ಹೆಚ್ಚಾಗಿ ರಾಜಕೀಯದಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ.ಕಾಂಗ್ರೆಸ್​​​ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು


90 ವರ್ಷದ ವಯಸ್ಸಿನಲ್ಲಿ 50 ವರ್ಷದ ವ್ಯಕ್ತಿ ಹಾಗೆ ನಟಿಸೋಕೆ ಆಗುತ್ತಾ..? ಆದ್ದರಿಂದ ರಾಜಕೀಯ ಜೀವನಕ್ಕೆ ಗುಡ್ ಬೈ ಹೇಳುವ ಬಗ್ಗೆ ನಿರ್ಧರಿಸಿದ್ದೇನೆ ಎಂದರು.

ವಯಸ್ಸಿನ ಕಾರಣದಿಂದ ಸಾರ್ವಜನಿಕ ಜೀವನದಿಂದ ದೂರ ಇದ್ದೇನೆ, ಹಾಗಾಗಿ ಈ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತರುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

ಎಸ್.ಎಂ ಕೃಷ್ಣ 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾಗಿದ್ದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯು ಸಹ ಕಾರ್ಯ ನಿರ್ವಹಿಸಿದ್ದಾರೆ.

ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ ೨೦೧೭ ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪದೆದರು.

  • 1999 ರಿಂದ 2004 ರವರೆಗೆ ಕರ್ನಾಟಕದ 16 ನೇ ಮುಖ್ಯಮಂತ್ರಿಯಾಗಿದ್ದರು
  • 2004 ರಿಂದ 2008 ರವರೆಗೆ ಮಹಾರಾಷ್ಟ್ರದ 19 ನೇ ರಾಜ್ಯಪಾಲರಾಗಿದ್ದರು .
  • ಎಸ್.ಎಂ.ಕೃಷ್ಣಡಿಸೆಂಬರ್ 1989 ರಿಂದ ಜನವರಿ 1993 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.
error: Content is protected !!