December 11, 2024

Newsnap Kannada

The World at your finger tips!

politics,congress, retirement

ಮಾಜಿ ಸಿಎಂ ಎಸ್ ಎಂ ಕೃಷ್ಣ ಇನ್ನಿಲ್ಲ

Spread the love
  • ತಡ ರಾತ್ರಿ ನಿಧನರಾಗಿರುವ ಎಸ್.ಎಂ ಕೃಷ್ಣ
  • ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣ
  • ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಎಸ್ಎಂಕೃಷ್ಣ

ಬೆಂಗಳೂರು :ರಾಜ್ಯದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ (92) ಮಂಗಳವಾರ ವಿಧಿವಶರಾದರು.

ವಯೋಸಹಜ ಕಾಯಲೆಯಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಕೃಷ್ಣ ಅವರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿದ್ದರು.

ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು.

ಕೃಷ್ಣ ಪರಿಚಯ :

  • ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಮಂಡ್ಯದ ಸೋಮನಹಳ್ಳಿಯಲ್ಲಿ 1932ರಲ್ಲಿ ಜನಿಸಿದ್ದರು.
  • ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದುಕೊಂಡಿದ್ದರು.
  • ಎಸ್‌ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು.
  • ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.

ಸ್ಪೀಕರ್ ಆಗಿಯೂ ಸೇವೆ ಸಲ್ಲಿಕೆ
ಡಿಸೆಂಬರ್ 1989ರಿಂದ ಜನವರಿ 1993ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದರು. 1971 ರಿಂದ 2014ರವರೆಗೆ ವಿವಿಧ ಕಾಲಘಟ್ಟದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಆಗಿದ್ದರು.

Copyright © All rights reserved Newsnap | Newsever by AF themes.
error: Content is protected !!