ಬೆಂಗಳೂರು : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ.
ಕಳೆದ ಫೆಬ್ರವರಿ 2 ರಂದು ತಮ್ಮ ಮಗಳು ಅಪ್ರಾಪ್ತೆಯ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಫೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್ಐಆರ್ ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ. ಪೆಟ್ರೋಲ್, ಡೀಸೆಲ್ ಪ್ರತಿ ಲೀಟರ್ ಗೆ 2 ರೂ ಇಳಿಕೆ | Petrol Price Reduced
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿಯು ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಓಡಾಟ ನಡೆಸುತ್ತಿರುವ ಯಡಿಯೂರಪ್ಪ ಅವರು ಚುನಾವಣಾ ಪ್ರಚಾರಕ್ಕೆ ಅಣಿಯಾಗುತ್ತಿದ್ದಾರೆ. ಈ ನಡುವೆ ಪೋಕ್ಸೋ ಪ್ರಕರಣ ದಾಖಲಾಗಿರುವುದು ಯಡಿಯೂರಪ್ಪ ಅವರು ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ. ಬಂಧನದ ಭೀತಿಯೂ ಎದುರಾಗಿದೆ.
53 ಮಂದಿ ವಿರುದ್ಧ ದೂರು ನೀಡಿದ ಮಹಿಳೆ ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು , ಬಿಸಿನೆಸ್ ಮ್ಯಾನ್‌ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ದವೇ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧಫೋಕ್ಸೋ ಕಾಯ್ದೆ ಅಡಿ FIR – former CM Yeddyurappa FIR under pocso Act #pocso #bjp #inc #india #bengaluru
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ