ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ, ಆತ್ಮಹತ್ಯೆಗೆ ನಿದಿ೯ಷ್ಟ ಕಾರಣ ತಿಳಿದಿಲ್ಲ. ಮಾನಸಿಕ ಖನ್ನತೆ , ನಿತ್ಯವೂ ವಿಪರೀತ ತಲೆ ನೋವಿನಿಂದ ಬಳಲುತ್ತಿದ್ದರು ಎಂದು ಗೊತ್ತಾಗಿದೆ.
ಮಗುವಾದ ಬಳಿಕ ಸೌಂದರ್ಯ ಡಿಪ್ರೆಷನ್‌ಗೆ (ಮಾನಸಿಕ ಖಿನ್ನತೆ) ಒಳಗಾಗಿದ್ದೇ ಆತ್ಮಹತ್ಯೆಗೆ ಕಾರಣ ಎಂಬ ಅಂಶವನ್ನು ಪರಿಶೀಲನೆ ಮಾಡಲಾಗುತ್ತಿದೆ.
ಶವ ಪರೀಕ್ಷೆ ಪೂಣ೯ಗೊಂಡಿದೆ. ಮೇಲುನೋಟಕ್ಕೆ ದೇಹದ ಯಾವುದೇ ಭಾಗದಲ್ಲಿ ಗಾಯದ ಗುರುತುಗಳಿಲ್ಲ. ಆತ್ಮಹತ್ಯೆ ಮಾಡಿಕೊಂಡ ರೂಂ ನಲ್ಲಿ ಡೆತ್ ನೋಟ್ ಕೂಡ ಸಿಕ್ಕಿಲ್ಲ. ಹೀಗಾಗಿ ಆತ್ಮಹತ್ಯೆಗೆ ನಿಖರವಾದ ಕಾರಣವನ್ನು ತಕ್ಷಣಕ್ಕೆ ಹುಡುಕುವುದು ಪೋಲಿಸರಿಗೆ ಕಷ್ಟವಾಗಿದೆ.
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ಪತಿ ಡಾ ನಿರಂಜನ್ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಆಗಿದ್ದರು. ದಂಪತಿಗೆ 9 ತಿಂಗಳ ಗಂಡು ಮಗು ಇದೆ.
ರಾಮಯ್ಯದಲ್ಲಿ ವೈದ್ಯಕೀಯ ಶಿಕ್ಷಣ ಮುಗಿಸಿ ಬೌರಿಂಗ್‌ನಲ್ಲೇ ಸರ್ಜನ್ ಆಗಿದ್ದ ಸೌಂದರ್ಯ ಅವರು ಮಗುವಾದ ನಂತರ ಕೆಲಸ ಬಿಟ್ಟಿದ್ದರು. ನಂತರ ಡಿಪ್ರೆಷನ್‌ಗೆ ಒಳಗಾಗಿದ್ದರು. ಕಳೆದ ಮೂರು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.
ಸೌಂದರ್ಯ ಹಾಗೂ ಪತಿ ಡಾ. ನಿರಂಜನ್ ಅವರು ಧವಳಗಿರಿ ಅಪಾರ್ಟ್ಮೆಂಟ್‌ನಲ್ಲಿ ವಾಸವಾಗಿದ್ದರು. ಆದರೆ ಇಂದು ಡಾಲರ್ಸ್ ಕಾಲೋನಿಯ ಲೆಗೆಸ್ಸಿ ಅಪಾರ್ಟ್ಮೆಂಟ್ ಫ್ಲಾಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಗುವನ್ನು ಪಕ್ಕದ ರೂಮ್‌ನಲ್ಲಿ ಮಲಗಿಸಿ ತಾನು ಬೇರೊಂದು ರೂಮ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗ್ಗೆ 11 ಗಂಟೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಧಾನಿ ಮೋದಿ ಯಡಿಯೂರಪ್ಪಗೆ ಫೋನ್ ಮಾಡಿ ಸಾಂತ್ವನ :
ಈ ನಡುವೆ ಪ್ರಧಾನಿ ಮೋದಿ ದೂರವಾಣಿ ಕರೆ ಮಾಡಿ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಸಾಂತ್ವಾನ ಹೇಳಿದರು
ಸಂಜೆ ಅಂತ್ಯಕ್ರಿಯೆ :
ಆತ್ಮಹತ್ಯೆ ಮಾಡಿಕೊಂಡ ಸೌಂದರ್ಯಳ ಅಂತ್ಯ ಕ್ರಿಯೆ ಇಂದು ಸಂಜೆಯೇ ಸೋಲದೇವನ ಹಳ್ಳಿ ಫಾರಂ ಹೌಸ್ ನಲ್ಲಿ ನಡೆಯಲಿದೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ