ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಿರ್ಮಿಸಲಾದ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಕಳಪೆ ಕಾಮಗಾರಿ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಇರುವ ಸರ್ವಿಸ್ ರಸ್ತೆಯನ್ನು ಸಮರ್ಪಕವಾಗಿ ಅಭಿವೃದ್ಧಿ ಮಾಡದಿದ್ದರೂ ಟೋಲ್ ಸಂಗ್ರಹಣೆ ಮಾಡುತ್ತಿರುವುದು ರಾಜ್ಯ ಸಾರ್ವಜನಿಕರಿಗೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕಣಿಮಿಣಿಕೆ ಟೋಲ್ ಬಳಿ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಟೋಲ್ ಸಂಗ್ರಹಕ್ಕೆ ವಿರೋಧಿಸಿದ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೆದ್ದಾರಿ ಪ್ರಾಧಿಕಾರದ ಟೋಲ್ ಸಂಗ್ರಹದ ವಿರುದ್ಧ ದಿನೇ ದಿನೇ ಒಂದಲ್ಲ ಒಂದು ಪ್ರತಿಭಟನೆಗಳು ನಡೆಯುತ್ತಿವೆ. ಈಗ ಟೋಲ್ ಸಂಗ್ರಹ ವಿಚಾರದಲ್ಲಿ ರಾಜಕೀಯ ತಿರುವು ಪಡೆದುಕೊಂಡಿದೆ. ನಿನ್ನೆ ಕಾಂಗ್ರೆಸ್ ಪ್ರತಿಭಟನೆ ಬೆನ್ನಲ್ಲೇ, ಇಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಲಾಗುತ್ತಿತ್ತು.
ಟೋಲ್ ಸಂಗ್ರಹಕ್ಕೆ ಅಡ್ಡಿ: ಹೆಜ್ಜಾಲ ಬಳಿಯ ಕಣಮಿಣಕಿ ಟೋಲ್ ಸಮೀಪ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ರಸ್ತೆಗೆ ಅಡ್ಡಬಂದು ಟೋಲ್ ಸಂಗ್ರಹ ಮಾಡದಂತೆ ತಡೆಯಲು ಮುಂದಾದ ನಿಖಿಲ್ ಕುಮಾರಸ್ವಾಮಿ ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಮತ್ತು ಟೋಲ್ ಸಂಗ್ರಹಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.ಇದನ್ನು ಓದಿ –ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಕಾರು ದರೋಡೆ : ಚಿನ್ನಾಭರಣ ದೋಚಿ ಪರಾರಿ
#NikhilKumarswamy #Ramnagar #arrested #NikhilArrested #protest #nationalHighway #BREAKINGNEWS #JDS
More Stories
ಮಧ್ಯಮ ವರ್ಗಕ್ಕೆ ಶುಭವಾರ್ತೆ: 12 ಲಕ್ಷ ರೂ. ಆದಾಯದವರೆಗೆ ತೆರಿಗೆ ವಿನಾಯಿತಿ
ಕೇಂದ್ರ Budget 2025 : 120 ಹೊಸ ವಿಮಾನ ನಿಲ್ದಾಣಗಳ ಸ್ಥಾಪನೆ, ಪ್ರಯಾಣಿಕರಿಗೆ ಸುಲಭ ಸಂಚಾರ
36 ಜೀವರಕ್ಷಕ ಔಷಧಿಗಳಿಗೆ ಕಸ್ಟಮ್ಸ್ ಸುಂಕ ವಿನಾಯಿತಿ