ಪ್ರತಿಭಟನೆಗೆ ಇಳಿದ ಮಾಜಿ ಸಿಎಂ ಪುತ್ರ ನಿಖಿಲ್‌ ಕುಮಾರಸ್ವಾಮಿ ಪೋಲಿಸರ ವಶಕ್ಕೆ

Team Newsnap
1 Min Read
Former CM's son Nikhil Kumaraswamy, who went to protest, was taken into police custody ಪ್ರತಿಭಟನೆಗೆ ಇಳಿದ ಮಾಜಿ ಸಿಎಂ ಪುತ್ರ ನಿಖಿಲ್‌ ಕುಮಾರಸ್ವಾಮಿ ಪೋಲಿಸರ ವಶಕ್ಕೆ

ಟೋಲ್ ಸಂಗ್ರಹ ವಿರೋಧಿಸಿ ಪ್ರತಿಭಟನೆಗೆ ಇಳಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಹಾಗೂ ಮಾಗಡಿ ಶಾಸಕ ಎ. ಮಂಜುನಾಥ್‌ ಅವರನ್ನು ರಾಮನಗರ ಪೊಲೀಸರು ವಶಕ್ಕೆ ಪಡೆದುಕೊಂಡರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಿರ್ಮಿಸಲಾದ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಕಳಪೆ ಕಾಮಗಾರಿ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಇರುವ ಸರ್ವಿಸ್‌ ರಸ್ತೆಯನ್ನು ಸಮರ್ಪಕವಾಗಿ ಅಭಿವೃದ್ಧಿ ಮಾಡದಿದ್ದರೂ ಟೋಲ್‌ ಸಂಗ್ರಹಣೆ ಮಾಡುತ್ತಿರುವುದು ರಾಜ್ಯ ಸಾರ್ವಜನಿಕರಿಗೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಕಣಿಮಿಣಿಕೆ ಟೋಲ್‌ ಬಳಿ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಟೋಲ್‌ ಸಂಗ್ರಹಕ್ಕೆ ವಿರೋಧಿಸಿದ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೆದ್ದಾರಿ ಪ್ರಾಧಿಕಾರದ ಟೋಲ್‌ ಸಂಗ್ರಹದ ವಿರುದ್ಧ ದಿನೇ ದಿನೇ ಒಂದಲ್ಲ ಒಂದು ಪ್ರತಿಭಟನೆಗಳು ನಡೆಯುತ್ತಿವೆ. ಈಗ ಟೋಲ್‌ ಸಂಗ್ರಹ ವಿಚಾರದಲ್ಲಿ ರಾಜಕೀಯ ತಿರುವು ಪಡೆದುಕೊಂಡಿದೆ. ನಿನ್ನೆ ಕಾಂಗ್ರೆಸ್ ಪ್ರತಿಭಟನೆ ಬೆನ್ನಲ್ಲೇ, ಇಂದು ಜೆಡಿಎಸ್ ನಾಯಕ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಲಾಗುತ್ತಿತ್ತು.

ಟೋಲ್‌ ಸಂಗ್ರಹಕ್ಕೆ ಅಡ್ಡಿ: ಹೆಜ್ಜಾಲ ಬಳಿಯ ಕಣಮಿಣಕಿ ಟೋಲ್ ಸಮೀಪ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ರಸ್ತೆಗೆ ಅಡ್ಡಬಂದು ಟೋಲ್‌ ಸಂಗ್ರಹ ಮಾಡದಂತೆ ತಡೆಯಲು ಮುಂದಾದ ನಿಖಿಲ್‌ ಕುಮಾರಸ್ವಾಮಿ ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಮತ್ತು ಟೋಲ್‌ ಸಂಗ್ರಹಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.ಇದನ್ನು ಓದಿ –ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಕಾರು ದರೋಡೆ : ಚಿನ್ನಾಭರಣ ದೋಚಿ ಪರಾರಿ

#NikhilKumarswamy #Ramnagar #arrested #NikhilArrested #protest #nationalHighway #BREAKINGNEWS #JDS

Share This Article
Leave a comment