ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ (Former Congress MLA Vasu) ವಾಸು (72) ಇಂದು ಬೆಳಿಗ್ಗೆ ನಿಧನರಾಗಿದ್ದಾರೆ .
ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.
ಇದನ್ನು ಓದಿ –ಮೈಸೂರಿನಿಂದ ಸಿಂಹ ಬದಲು ಯದುವೀರ್ ಒಡೆಯರ್ ಸ್ಪರ್ಧೆ ?
2013ರಿಂದ 2018ರವರೆಗೆ ವಾಸು ಅವರು ಚಾಮರಾಜ ನಗರದ ಶಾಸಕರಾಗಿ ಅಭಿವೃದ್ಧಿ ಕಾರ್ಯಗಳ ಮೂಲಕ ಗಮನ ಸೆಳೆದಿದ್ದರು ಮತ್ತು ಮೈಸೂರು ಮೇಯರ್ ಆಗಿಯೂ ಸೇವೆ ಸಲ್ಲಿಸಿದ್ದರು.
ವಾಸು ಅವರು ಮೈಸೂರಿನ ಜೆಎಸ್‌ಎಸ್ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಿದ್ದು, ಅಂತಿಮ ದರ್ಶನ ಬಳಿಕ ಜೆಎಸ್‌ಎಸ್ ಮೆಡಿಕಲ್ ಕಾಲೇಜಿಗೆ ದೇಹ ಹಸ್ತಾಂತರ ಮಾಡಲಾಗುವುದು ಎಂದು ತಿಳಿದುಬಂದಿದೆ.
More Stories
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ