February 21, 2026

Newsnap Kannada

The World at your finger tips!

kalburgi accident

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ- ಹುಡಾ ಮಾಜಿ ಅಧ್ಯಕ್ಷ ನಾಗೇಶ್ ಕಲಬುರ್ಗಿ ಪುತ್ರ ದುರಂತ ಸಾವು

Spread the love

ರಸ್ತೆಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಹುಬ್ಬಳ್ಳಿ -ಧಾರವಾಡ ಅಭಿವೃದ್ದಿ ಮಂಡಳಿಯ ಮಾಜಿ ಅಧ್ಯಕ್ಷ ನಾಗೇಶ್ ಕಲಬುರ್ಗಿ ಪುತ್ರ ಮೃತ ಪಟ್ಟಿದ್ದಾರೆ.

ತಿಲಕ್ ಕಲಬುರ್ಗಿ (22) ಮೃತ ದುರ್ದೈವಿ. ತಾರಿಹಾಳ ಬೈಪಾಸ್ ಬಳಿ ಮೈಕ್ರೋಫಿನಿಶ್ ಫ್ಯಾಕ್ಟರಿ ಬಳಿ ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ.

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾದ ರಭಸಕ್ಕೆ ತಿಲಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆತನ ಸ್ನೇಹಿತನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!