December 22, 2024

Newsnap Kannada

The World at your finger tips!

japan,shot dead,crime

Former Japanese Prime Minister Shimbo Abe was killed in the shooting ಗುಂಡಿನ ದಾಳಿಗೆ ಬಲಿಯಾದ ಜಪಾನ್ ಮಾಜಿ ಪ್ರಧಾನಿ ಶಿಂಬೋ ಅಬೆ #Thenewsnap #Latestnews #Japan #Prime_Minister #International #Kannada_news #Shot_dead #Mandya #Bengaluru #Namma_Mysuru

ಗುಂಡಿನ ದಾಳಿಗೆ ಬಲಿಯಾದ ಜಪಾನ್ ಮಾಜಿ ಪ್ರಧಾನಿ ಶಿಂಬೋ ಅಬೆ

Spread the love

ಗುಂಡಿನ ದಾಳಿಗೆ ಒಳಗಾಗಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಬೋ ಅಬೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಸರ್ಕಾರಿ ಮೂಲಗಳು ಈ ಸಂಗತಿಯನ್ನು ಖಚಿತಪಡಿಸಿವೆ ಎಂದು ಜಪಾನ್​ ಮಾಧ್ಯಮಗಳು ವರದಿ ಮಾಡಿವೆ.

WhatsApp Image 2022 07 08 at 2.47.43 PM

ಪಶ್ಚಿಮ ಜಪಾನ್​ನ ನಾರಾ ನಗರದಲ್ಲಿ ಶುಕ್ರವಾರ ಸ್ಥಳೀಯ ಕಾಲಮಾನ 11.30ರ ವೇಳೆಗೆ ಚುನಾವಣಾ ಭಾಷಣ ಮಾಡುವ ಮುನ್ನ ಒಬ್ಬ ವ್ಯಕ್ತಿ ಹಿಂದಿನಿಂದ ಅಬೆ ಅವರ ಮೇಲೆ ಗುಂಡು ಹಾರಿಸಿದದನು . ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಬೆ ನಿಧನರಾಗಿದ್ದಾರೆ.ಇದನ್ನು ಓದಿ –ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯಸಭೆ ಸದಸ್ಯ ಜಗ್ಗೇಶ್ – ವಿಡಿಯೋ ನೋಡಿ

ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜಪಾನ್ ನ ಮುಖ್ಯ ಕ್ಯಾಬಿನೇಟ್ ಕಾರ್ಯದರ್ಶಿ ಹಿರೋಕಾಜು ಮಾಟ್ಸುನೊ ಇಂತಹ ಅಮಾನುಷ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.

japan,Prime Minister,crime

ಅಬೆ ಅವರ ಮೇಲೆ 2 ಸುತ್ತು ಗುಂಡಿನ ದಾಳಿ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕೃತ್ಯ ನಡೆಸಿದ ಆರೋಪಿಯನ್ನು ತೆತ್ಸುಯಾ ಯಮಗಾಮಿ ಎಂದು ಪೊಲೀಸರು ಗುರುತಿಸಿದ್ದಾರೆ, ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಂಟ್ರಿ ಪಿಸ್ತೂಲ್​ನಿಂದ ಗುಂಡು ಹಾರಿಸಿದ್ದಾಗಿ ಮಾಧ್ಯಮಗಳು ವರದಿ ಮಾಡಿದ್ದು, ಆರೋಪಿ ಜಪಾನ್ ಸೈನ್ಯದಲ್ಲಿ ಕಾರ್ಯನಿರ್ವಹಿಸಿದ್ದ ಎನ್ನಲಾಗಿದೆ.

Copyright © All rights reserved Newsnap | Newsever by AF themes.
error: Content is protected !!