5 ದಶಕದ ಸುದೀರ್ಘ ರಾಜಕೀಯ ಜೀವನದಿಂದ ವಿಮುಕರಾದ ಮಾಜಿ ಸಚಿವ ಬಿ.ಜೆ.ಪುಟ್ಟಸ್ವಾಮಿ ಈಗ ಸನ್ಯಾಸ ದೀಕ್ಷೆ ಸ್ವೀಕರಿಸಿ ಪೂರ್ಣಾನಂದ ಪುರಿ ಸ್ವಾಮೀಜಿಗಳಾಗಿದ್ದಾರೆ
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಕೈಲಾಸ ಆಶ್ರಮ ಮಹಾಸಂಸ್ಥಾನದ ಪೀಠಾಧಿಪತಿ ಜಯೇಂದ್ರಪುರಿ ಸ್ವಾಮೀಜಿ ಅವರು ಪುಟ್ಟಸ್ವಾಮಿಗೆ ಸನ್ಯಾಸ ದೀಕ್ಷೆ ನೀಡಿ ಪೂರ್ಣಾನಂದ ಪುರಿ ಸ್ವಾಮಿಗಳೆಂದು ನಾಮಕರಣ ಮಾಡಿದರು.
ನೆಲಮಂಗಲದ ಬಳಿಯ ಮಾದನಾಯಕನಹಳ್ಳಿಯಲ್ಲಿನ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠಕ್ಕೆ ಪ್ರಥಮ ಪೀಠಾಧಿಪತಿಯಾಗಲಿದ್ದಾರೆ.
ಮೇ 15ರಂದು ಕೈಲಾಸ ಮಠದ ಜಯೇಂದ್ರಪುರಿ ಸ್ವಾಮೀಜಿಗಳು ಪಟ್ಟಾಭಿಷೇಕ ಮಹೋತ್ಸವ ನೆರವೇರಿಸಿಕೊಡಲಿದ್ದಾರೆ.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಅಪ್ತ ಬಳಗದಲ್ಲಿದ್ದ ಪುಟ್ಟಸ್ವಾಮಿ ಬಿಎಸ್ವೈ ರಾಜಕೀಯ ಕಾರ್ಯದರ್ಶಿಯೂ ಆಗಿದ್ದರು. ಅಲ್ಲದೇ ಸಹಕಾರ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಬಿಜೆಪಿ ಸರ್ಕಾರದ ಈ ಅವಧಿಯಲ್ಲಿ ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷರಾಗಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು