December 23, 2024

Newsnap Kannada

The World at your finger tips!

vinay kulakarni

ಮಾಜಿ ಸಚಿವ ಹಿಂಡಲಗಾ ಜೈಲಿಗೆ ಶಿಫ್ಟ್

Spread the love

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್​ನ ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಕೋಟ್೯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇಂದು ಸಂಜೆ ವೇಳೆಗೆ ವಿನಯ್ ಕುಲಕರ್ಣಿಯನ್ನು ಬಂಧಿಸಿದ ಸಿಸಿಬಿ ಅಧಿಕಾರಿಗಳು ಜೆಎಂಎಫ್​​ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ವಿಚಾರಣೆ ವೇಳೆ ಸಿಬಿಐ ಅಧಿಕಾರಿಗಳು ಕಸ್ಟಡಿಗೆ ನೀಡುವಂತೆ ಮನವಿ ಮಾಡಿಕೊಂಡರು. ಆದರೆ ಕೋರ್ಟ್​ ವಿನಯ್ ಕುಲಕರ್ಣಿಯನ್ನ ನಾಳೆಯವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ. ನ್ಯಾಯಾಧೀಶ ಪಂಚಾಕ್ಷರಿ.ಎಚ್ ನ್ಯಾಯಾಂಗ ಬಂಧನ ಆದೇಶ ನೀಡಿದ್ದಾರೆ.

ಹೀಗಾಗಿ ಇಂದು ರಾತ್ರಿ ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಪ್ಟ್ ಮಾಡಲಾಗಿದೆ.

ನಾಳೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸುವ ಸಾಧ್ಯತೆ ಇದೆ.

Copyright © All rights reserved Newsnap | Newsever by AF themes.
error: Content is protected !!