July 7, 2022

Newsnap Kannada

The World at your finger tips!

sriramareddy

ಮಾಜಿ ಶಾಸಕ ಶ್ರೀರಾಮರೆಡ್ಡಿ ಹೃದಯಾಘಾತದಿಂದ ನಿಧನ

Spread the love

ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ಹೃದಯಾಘಾತದಿಂದ ಇಂದು ನಿಧನರಾದರು.

ಬಾಗೇಪಲ್ಲಿ ಕ್ಷೇತ್ರದ ಮಾಜಿ ಶಾಸಕ ಜಿ ವಿ ಶ್ರೀರಾಮರೆಡ್ಡಿಯವರು ಸರ್ಕಾರಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಸಿಪಿಐಎಂ ಪಕ್ಷದಿಂದ ಶಾಸಕರಾಗಿದ್ದರು. ಸಿಪಿಐಎಂ ಪಕ್ಷದಿಂದ ಉಚ್ಛಾಟಿತರಾದ ನಂತರ ಪ್ರಜಾ ಸಂಘರ್ಷ ಸಮಿತಿ ಪಕ್ಷ ಸ್ಥಾಪನೆ ಮಾಡಿದ್ದರು. ಶ್ರೀರಾಮರೆಡ್ಡಿ ನಿಧನಕ್ಕೆ ಅಪಾರ ಪ್ರಮಾಣದ ಬೆಂಬಲಿಗರ ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಚಿವ ಸುಧಾಕರ್, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಜಿ.ವಿ.ಶ್ರೀರಾಮರೆಡ್ಡಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಭಗವಂತ ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಎಂದು ಕೋರಿದ್ದಾರೆ.

error: Content is protected !!