ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ 3 ವರ್ಷ ಜೈಲು

Team Newsnap
0 Min Read

ಕರಾಚಿ: ತೋಷಾಖಾನಾ ಪ್ರಕರಣದಲ್ಲಿ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಅಧ್ಯಕ್ಷ, ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ದೋಷಿ ಎಂದು ಘೋಷಿಸಿ, ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಸುಪ್ರೀಂ ಕೋರ್ಟ್ ಶನಿವಾರ ತೀರ್ಪು ನೀಡಿದೆ.

ಪಾಕಿಸ್ತಾನದ ಮಾಜಿ ಪ್ರಧಾನಿ ಅಧಿಕಾರದಲ್ಲಿದ್ದಾಗ ದುಬಾರಿ ಸರ್ಕಾರಿ ಉಡುಗೊರೆಗಳನ್ನು ಮಾರಾಟ ಮಾಡುವ ಮೂಲಕ ಲಾಭ ಪಡೆದಿದ್ದಾರೆ ಎಂಬ ಆರೋಪ ಇದೆ.ಇಂಡಿಯಾ ಲಿಮಿಟೆಡ್ : 1764 ಕಾರ್ಯನಿರ್ವಾಹಕ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

ಈ ಭ್ರಷ್ಟಾಚಾರ ಪ್ರಕರಣದ ಮರು ವಿಚಾರಣೆ ನಡೆಸುವಂತೆ ಕೆಳ ನ್ಯಾಯಾಲಯದ ತೀರ್ಪನ್ನು ಪಾಕಿಸ್ತಾನ ಹೈಕೋರ್ಟ್ ಶುಕ್ರವಾರ ತಳ್ಳಿಹಾಕಿದ ನಂತರ ಈ ಬೆಳವಣಿಗೆ ನಡೆದಿದೆ.

Share This Article
Leave a comment