ಹಿರಿಯ ಸಮಾಜವಾದಿ ನಾಯಕ, ಕೇಂದ್ರದ ಮಾಜಿ ಸಚಿವ ಶರದ್ ಯಾದವ್ (75) ಕಳೆದ ರಾತ್ರಿ
ನಿಧನರಾದರು. ಯಾದವ್ ಪುತ್ರಿ ಸುಭಾಷಿಣಿ ಯಾದವ್, ‘ಅಪ್ಪ ಇನ್ನಿಲ್ಲ’ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶರದ್ ಯಾದವ್, ನಿನ್ನೆ ರಾತ್ರಿ ದೆಹಲಿಯ ಛತ್ತರ್‌ಪುರ ನಿವಾಸದಲ್ಲಿ ಹಠಾತ್ ಕುಸಿದು ಬಿದ್ದರು.6 ಐಪಿಎಸ್ ಅಧಿಕಾರಿ’ಗಳ ವರ್ಗಾವಣೆ ಮಾಡಿದ ಸರ್ಕಾರ
ಕೂಡಲೇ ಅವರನ್ನು ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಅವರು ಬದುಕುಳಿಯಲಿಲ್ಲ.
ಯಾದವ್, ಬಹು ದಿನಗಳಿಂದ ಮೂತ್ರಪಿಂಡ ಕಾಯಿಲೆಗೆ ಒಳಗಾಗಿದ್ದರು.
ಶರದ್ ಯಾದವ್ 1999 ಮತ್ತು 2004ರ ನಡುವೆ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ವಿವಿಧ ಖಾತೆಗಳನ್ನು ನಿರ್ವಹಿಸಿದ್ದರು. 2003ರಲ್ಲಿ ಶರದ್ ಯಾದವ್ ಜನತಾ ದಳದ ಯುನೈಟೆಡ್ ಅಧ್ಯಕ್ಷರಾಗಿದ್ದರು.
7 ಬಾರಿ ಲೋಕಸಭೆ ಹಾಗೂ 3 ಬಾರಿ ರಾಜ್ಯಸಭಾ ಸಂಸದರಾಗಿದ್ದರು. ಯಾದವ್ ಪತ್ನಿ, ಪುತ್ರಿ ಮತ್ತು ಪುತ್ರರನ್ನು ಅಗಲಿದ್ದಾರೆ.
ಶರದ್ ಯಾದವ್ ಅಂತ್ಯಕ್ರಿಯೆಯು ಅವರ ಜನ್ಮಸ್ಥಳ ಮಧ್ಯಪ್ರದೇಶದ ಹೋಶಂಗಾಬಾದ್‌ನಲ್ಲಿ ನಾಳೆ ನಡೆಯಲಿದೆ. ಇಂದು ಬೆಳಗ್ಗೆ 10 ಗಂಟೆಯಿಂದ ದೆಹಲಿಯಲ್ಲಿ ಅಂತಿಮ ದರ್ಶನ ನಡೆಯಲಿದೆ.
ಶರದ್ ಯಾದವ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಬಿಹಾರ ಸಿಎಂ ನಿತೀಶ್ ಕುಮಾರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
- ರಾಜ್ಯ ವಿಧಾನಪರಿಷತ್ 3 ಸ್ಥಾನಗಳಿಗೆ ಜೂ.30ರಂದು ಉಪ ಚುನಾವಣೆ ಪ್ರಕಟ
- ಹೇಮಂತ್ ನಿಂಬಾಳ್ಕರ್ ವಾರ್ತಾ ಇಲಾಖೆ ಕಮೀಷನರ್ ನೇಮಕ
- ರಾಜ್ಯ ಸರ್ಕಾರದಿಂದ 11 ಐಎಎಸ್ ಅಧಿಕಾರಿ’ಗಳ ವರ್ಗಾವಣೆ
- ಬಾಡಿಗೆದಾರರಿಗೂ 200 ಯುನಿಟ್ ಉಚಿತ ವಿದ್ಯುತ್
- ಪತ್ರಕರ್ತ ಹೊನಕೆರೆ ನಂಜಂಡೇಗೌಡರಿಗೆ ಖಾದ್ರಿ ಶಾಮಣ್ಣ ಪ್ರಶಸ್ತಿ ಪ್ರಕಟ
- ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ: ಜು. 7 ರಂದು ಬಜೆಟ್ ಮಂಡನೆ
More Stories
ರಾಜ್ಯ ವಿಧಾನಪರಿಷತ್ 3 ಸ್ಥಾನಗಳಿಗೆ ಜೂ.30ರಂದು ಉಪ ಚುನಾವಣೆ ಪ್ರಕಟ
ಬಾಡಿಗೆದಾರರಿಗೂ 200 ಯುನಿಟ್ ಉಚಿತ ವಿದ್ಯುತ್
ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ: ಜು. 7 ರಂದು ಬಜೆಟ್ ಮಂಡನೆ