Main News

ಕೇಂದ್ರದ ಮಾಜಿ ಸಚಿವ ಶರದ್ ಯಾದವ್ ಇನ್ನಿಲ್ಲ

ಹಿರಿಯ ಸಮಾಜವಾದಿ ನಾಯಕ, ಕೇಂದ್ರದ ಮಾಜಿ ಸಚಿವ ಶರದ್ ಯಾದವ್ (75) ಕಳೆದ ರಾತ್ರಿ
ನಿಧನರಾದರು. ಯಾದವ್ ಪುತ್ರಿ ಸುಭಾಷಿಣಿ ಯಾದವ್, ‘ಅಪ್ಪ ಇನ್ನಿಲ್ಲ’ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶರದ್ ಯಾದವ್, ನಿನ್ನೆ ರಾತ್ರಿ ದೆಹಲಿಯ ಛತ್ತರ್‌ಪುರ ನಿವಾಸದಲ್ಲಿ ಹಠಾತ್ ಕುಸಿದು ಬಿದ್ದರು.6 ಐಪಿಎಸ್ ಅಧಿಕಾರಿ’ಗಳ ವರ್ಗಾವಣೆ ಮಾಡಿದ ಸರ್ಕಾರ

ಕೂಡಲೇ ಅವರನ್ನು ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಅವರು ಬದುಕುಳಿಯಲಿಲ್ಲ.

ಯಾದವ್, ಬಹು ದಿನಗಳಿಂದ ಮೂತ್ರಪಿಂಡ ಕಾಯಿಲೆಗೆ ಒಳಗಾಗಿದ್ದರು.
ಶರದ್ ಯಾದವ್ 1999 ಮತ್ತು 2004ರ ನಡುವೆ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ವಿವಿಧ ಖಾತೆಗಳನ್ನು ನಿರ್ವಹಿಸಿದ್ದರು. 2003ರಲ್ಲಿ ಶರದ್ ಯಾದವ್ ಜನತಾ ದಳದ ಯುನೈಟೆಡ್ ಅಧ್ಯಕ್ಷರಾಗಿದ್ದರು.

7 ಬಾರಿ ಲೋಕಸಭೆ ಹಾಗೂ 3 ಬಾರಿ ರಾಜ್ಯಸಭಾ ಸಂಸದರಾಗಿದ್ದರು. ಯಾದವ್ ಪತ್ನಿ, ಪುತ್ರಿ ಮತ್ತು ಪುತ್ರರನ್ನು ಅಗಲಿದ್ದಾರೆ. 

ಶರದ್ ಯಾದವ್ ಅಂತ್ಯಕ್ರಿಯೆಯು ಅವರ ಜನ್ಮಸ್ಥಳ ಮಧ್ಯಪ್ರದೇಶದ ಹೋಶಂಗಾಬಾದ್‌ನಲ್ಲಿ ನಾಳೆ ನಡೆಯಲಿದೆ. ಇಂದು ಬೆಳಗ್ಗೆ 10 ಗಂಟೆಯಿಂದ ದೆಹಲಿಯಲ್ಲಿ ಅಂತಿಮ ದರ್ಶನ ನಡೆಯಲಿದೆ.

ಶರದ್ ಯಾದವ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಬಿಹಾರ ಸಿಎಂ ನಿತೀಶ್ ಕುಮಾರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024