ಬೆಂಗಳೂರಿನ ಸೋಲದೇವನಹಳ್ಳಿ ಇಬ್ಬರು ಯುವತಿ ಸೇರಿ ನಾಲ್ವರು ಮಕ್ಕಳು ನಾಪತ್ತೆ ಆಗಿದ್ದವರು ಮಂಗಳೂರಿನ ಪಾಂಡೇಶ್ವರದಲ್ಲಿ ಪತ್ತೆಯಾಗಿದ್ದಾರೆ.
ಪಾಂಡೇಶ್ವರ ಠಾಣೆ ಪೊಲೀಸರು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಅಮೃತವರ್ಷಿಣಿ, ರಾಯನ್ ಸಿದ್ದಾಂತ್, ಭೂಮಿ, ಚಿಂತನ್ ಎಂಬ ಮಕ್ಕಳನ್ನ ರಕ್ಷಣೆ ಮಾಡಲಾಗಿದೆ. ಕೂಡಲೇ ಪೊಲೀಸರು ಮಕ್ಕಳು ಸಿಕ್ಕಿರುವ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದಾರೆ.
ಆಟೋ ಡ್ರೈವರ್ ಸಮಯ ಪ್ರಜ್ಞೆಯಿಂದ ಮಕ್ಕಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಆಟೋ ಹತ್ತಿದ ಮಕ್ಕಳು ಸರಿಯಾದ ವಿಳಾಸ ಹೇಳಿರಲಿಲ್ಲ. ಮಕ್ಕಳ ಚಲನವಲನ ಗಮನಿಸಿ ಅನುಮಾನಗೊಂಡ ಆಟೋ ಚಾಲಕ, ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ನಂತರ ವಿಚಾರಿಸಿದಾಗ ಬೆಂಗಳೂರಿನಲ್ಲಿ ನಾಪತ್ತೆಯಾದ ಮಕ್ಕಳು ಎಂದು ತಿಳಿದುಬಂದಿದೆ.
ಮನೆಯವರು ನಮ್ಮನ್ನು ಬೇರೆ ಮಾಡೋಕೆ ನೋಡಿದರು. ಅದಕ್ಕೆ ಮನೆ ಬಿಟ್ಟು ಬಂದ್ವಿ. ಮೈಸೂರಿನಿಂದ ಬೆಂಗಳೂರಿಗೆ ಹೋಗಿ ಮತ್ತೆ ಮಂಗಳೂರಿಗೆ ಬಂದ್ವಿ. ಮಂಗಳೂರಿಗೆ ಬೆಳಗ್ಗೆ ಬಸ್ನಲ್ಲಿ ಬಂದ್ವಿ ಅಂತಾ ಮಕ್ಕಳು ಪೊಲೀಸರ ಮುಂದೆ ಹೇಳಿದ್ದಾರೆ
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ