ರಾಣೇಬೆನ್ನೂರು ಸಮೀಪ ಕಾರು ಪಲ್ಟಿಯಾಗಿ ನಾಲ್ವರು ಸಾವು : 6 ಮಂದಿಗೆ ಗಾಯ

Team Newsnap
1 Min Read

ರಾಣೇಬೆನ್ನೂರು : ವೇಗವಾಗಿ ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ 6 ಮಂದಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಗುರುವಾರ ತಡ ರಾತ್ರಿ ಸಂಭವಿಸಿದೆ.

ಹಾವೇರಿಯ ಸುರೇಶ್(45), ಚೇತನಾ(07), ಐಶ್ವರ್ಯ(22) ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಪ್ರಮೀಳಾ(28) ಮೃತಪಟ್ಟಿದ್ದಾರೆ.

ಗಾಯಾಳುಗಳನ್ನು ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಹೈಕೋರ್ಟ್ ವಕೀಲೆ ಚೈತ್ರಾ ಗೌಡ ಅನುಮಾನಾಸ್ಪದ ಸಾವು : ಸಂಪೂರ್ಣ ವಿವರ

ನಂತರ ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೊರಟಿದ್ದಾಗ ಈ ದುರಂತ ಸಂಭವಿಸಿದೆ.

Share This Article
Leave a comment