ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ದ ಸಂಘರ್ಷದ ನಡುವೆ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರಿಸಲು ಕೇಂದ್ರದ ನಾಲ್ವರು ಸಚಿವರು ಉಕ್ರೇನ್‍ನ ನೆರೆಯ ದೇಶಗಳಿಗೆ ಪ್ರಯಾಣಿಸಲಿದ್ದಾರೆ.
ಉಕ್ರೇನ್ ಬಿಕ್ಕಟ್ಟಿನಿಂದ ದೇಶವನ್ನು ತೊರೆಯಲು ಪ್ರಯತ್ನಿಸುತ್ತಿರುವ ಭಾರತೀಯರ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬೆಳಗ್ಗೆ ಉನ್ನತ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸಚಿವರಾದ ಹರ್ದೀಪ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು ಮತ್ತು ವಿ.ಕೆ. ಸಿಂಗ್ ಅವರು ಭಾರತದ ವಿಶೇಷ ರಾಯಭಾರಿಗಳಾಗಿ ಉಕ್ರೇನ್ ಸುತ್ತಮುತ್ತಲಿನ ದೇಶಗಳಿಗೆ ತೆರಳಿ ಭಾರತೀಯರು ಸ್ಥಳಾಂತರಗೊಳ್ಳಲು ಸಹಾಯ ಮಾಡಲಿದ್ದಾರೆ.
ಪ್ರಧಾನಿ ಮೋದಿ ನಡೆಸುತ್ತಿರುವ ಎರಡನೇ ಸಭೆ ಇದು. ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಗೊಳಿಸಲು ಮೊದಲ ಆದ್ಯತೆ ನೀಡಲಾಗಿದೆ ಎಂದು ಮೋದಿ ತಿಳಿಸಿದ್ದಾರೆ.
ಈ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್, ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಹಲವು ಸಚಿವರು ಉಪಸ್ಥಿತರಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ