ನದಿಯಲ್ಲಿ ಈಜಲು ಹೋಗಿ ನಾಲ್ವರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಪಾಲಾಡ್ಕ ಗ್ರಾಮದ ಶಾಂಭವಿ ನದಿಯ ಪಟ್ಲಗುಂಡಿ ಎಂಬ ಪ್ರದೇಶದಲ್ಲಿ ನಡೆದಿದೆ.
ಮೃತರನ್ನು ಮೂಡುಶೆಡ್ಡೆ ನಿವಾಸಿ 18 ವರ್ಷದ ನಿಖಿಲ್, 20 ವರ್ಷದ ಹರ್ಷಿತಾ, ವೇಣೂರು ನಿವಾಸಿ 19 ವರ್ಷದ ಸುಭಾಷ್ ಮತ್ತು ಬಜ್ಪೆ ನಿವಾಸಿ 30 ವರ್ಷದ ರವಿ ಎಂದು ಗುರುತಿಸಲಾಗಿದೆ.
ಗ್ರಾಮದ ಕಡಂದಲೆ ಶ್ರೀಧರ ಆಚಾರ್ಯ ಎಂಬುವವರ ಮನೆಯಲ್ಲಿ ಮದುವೆಯ ಸಂಭ್ರಮವಿತ್ತು. ಮೊನ್ನೆಯೇ ಎಲ್ಲಾ ಸಂಬಂಧಿಕರು ಮನೆಗೆ ಆಗಮಿಸಿದ್ದರು. ಶಾಂಭವಿ ನದಿಯ ಪಟ್ಲಗುಂಡಿ ಬಳಿ ಮೊನ್ನೆ ಸಂಜೆ ಆಟವಾಡಲು ಹೋಗಿದ್ದರು. ಈಜು ಬರದಿದ್ದರು ಕೂಡ ಮೊನ್ನೆ ಆಟವಾಡಿ ಮದುವೆ ಮನೆಗೆ ವಾಪಾಸ್ ಆಗಿದ್ದರು.
ನಿನ್ನೆ ಕೂಡ ಈ ನಾಲ್ವರು ನೀರಿನಲ್ಲಿ ಆಟವಾಡುತ್ತಾ ಈಜಾಡಲು ಅಲ್ಲಿಗೆ ಹೋಗಿದ್ದಾರೆ. ಆದರೆ, ನಾಲ್ವರದಲ್ಲಿ ಹರ್ಷಿತಾ ಆಟವಾಡುತ್ತಾ ನೀರಿನಲ್ಲಿ ಮುಳುಗಿದ್ದಾಳೆ. ಅವಳನ್ನು ರಕ್ಷಿಸಲು ಹೋದ ಒಬ್ಬಬ್ಬರೂ ಕೂಡ ಮುಳುಗುತ್ತಾ ಸಾವನ್ನಪ್ಪಿದ್ದಾರೆ.
ಇದನ್ನು ನೋಡಿದ ಸ್ಥಳೀಯರೊಬ್ಬರು ಮಾಹಿತಿ ನೀಡಿ ಇಡೀ ಗ್ರಾಮವೇ ಅಲ್ಲಿ ಜಾಮಾಯಿಸಿತ್ತು. ಇನ್ನು ಅಗ್ನಿಶಾಮಕದಳ ಸಿಬ್ಬಂದಿಗಳು, ಈಜುಗಾರರು ಮತ್ತು ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಅಗ್ನಿಶಾಮಕದಳ ಸಿಬ್ಬಂದಿ ಮತ್ತು ಸ್ಥಳೀಯ ಈಜುಗಾರರು ನಾಲ್ವರ ಶವಗಳನ್ನು ಕೂಡ ಹೊರತೆಗೆದಿದ್ದಾರೆ.
ಇನ್ನು ಈ ದುರ್ಘಟನೆಯಿಂದಾಗಿ ಇಡೀ ಮದುವೆ ಮನೆಯಲ್ಲಿ ಸಂಭ್ರಮಕ್ಕೆ ಬ್ರೇಕ್ ಬಿದ್ದಿದೆ.
ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಮೂಡುಬಿದಿರೆ ಆಸ್ಪತ್ರೆಗೆ ರವಾನಿಸಲಾಗಿದೆ. ಮದುವೆಯ ಸಂಭ್ರಮಕ್ಕೆ ಬಂದವರು ಮಸಣ ಸೇರಿದ್ದು ನಿಜಕ್ಕೂ ದುರಂತ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ