ಶಿವಮೊಗ್ಗದ ಒಂದೇ ಕುಟುಂಬದ 4 ಮಂದಿಗೆ ಬ್ರಿಟನ್ ನ ರೂಪಾಂತರ ಕೊರೊನಾ ವೈರಸ್ ಸೋಂಕು ತಗುಲಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಯುಕೆ ವಾಪಸಿಗರ ಪೈಕಿ 107 ಜನರಿಗೆ ಆರ್.ಟಿ-ಪಿಸಿಆರ್ ಪಾಸಿಟಿವ್ ಬಂದಿತ್ತು. ಇವರೆಲ್ಲರ ಮಾದರಿಯನ್ನು ಸೀಕ್ವೆನ್ಸ್ ಪರೀಕ್ಷೆ ಮಾಡಲಾಗಿತ್ತು. 107ರಲ್ಲಿ 20 ಜನರಿಗೆ ರೂಪಾಂತರಿ ವೈರಸ್ ಕಂಡು ಬಂದಿದೆ.
ಬೆಂಗಳೂರು 3 ಮತ್ತು ಶಿವಮೊಗ್ಗದ ನಾಲ್ವರಲ್ಲಿ ಹೊಸ ರೂಪಾಂತರ ವೈರಸ್ ಕಂಡು ಬಂದಿದೆ. ಸೋಂಕಿತರ ಸಂಪರ್ಕಿತರನ್ನು ಸಾಂಸ್ಥಿಕ ಕ್ವಾರಂಟೈನ್ ನಲ್ಲಿರಿಸಲಾಗಿದೆ ಎಂದರು.
ಬೆಂಗಳೂರಿನ ಮೂವರು 39 ಜನರೊಂದಿಗೆ ಸಂಪರ್ಕ ಹೊಂದಿದ್ದರು. ಶಿವಮೊಗ್ಗ ಸೋಂಕಿತರ ಸಂಪರ್ಕದಲ್ಲಿದ್ದವರ ಕೆಲವರ ವರದಿ ಪಾಸಿಟಿವ್ ಬಂದಿದೆ ಎಂದು ಹೇಳಿದರು.
ಸೋಂಕಿತರ ಆರೋಗ್ಯ ಸ್ಥಿರವಾಗಿದೆ. ಎಲ್ಲರಿಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವೈರಸ್ ತೀವ್ರತೆ ಕಡಿಮೆ, ಆದ್ರೆ ಹರಡುವ ಗುಣ ಶೇ.70ಕ್ಕಿಂತ ಅಧಿಕ. ಹಾಗಾಗಿ ಸರ್ಕಾರ ಕೊರೊನಾ ಹರಡುವಿಕೆಯನ್ನು ತಡೆಯುವ ಕೆಲಸ ಮಾಡುತ್ತಿದೆ. ನಾಪತ್ತೆ ಆಗಿರುವ ಕೆಲವರ ಶೋಧದಲ್ಲಿ ಗೃಹ ಇಲಾಖೆ ತೊಡಗಿಕೊಂಡಿದೆ ಎಂದು ತಿಳಿಸಿದರು.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
More Stories
ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ