ಸತ್ತವರ ಹೆಸರಿನಲ್ಲಿ ಪಡಿತರ ಅಕ್ಕಿ ಪಡೆದು ವಂಚನೆ ಮಾಡಿರುವ ಪ್ರಕರಣ ಮಂಡ್ಯ ತಾಲೂಕಿನ ಹುನಗನಹಳ್ಳಿ ಗ್ರಾಮದಲ್ಲಿನ ನ್ಯಾಯ ಬೆಲೆ ಅಂಗಡಿ ಜರುಗಿದೆ.
ಮಾಲೀಕ ರಾಜು ಎಂಬವರು ಮೃತರ ಹೆಸರಿನಲ್ಲಿ ಅಕ್ಕಿ ಪಡೆದು ವಂಚಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಸರ್ಕಾರಕ್ಕೆ ಬದುಕಿದ್ದಾರೆಂದು ಲೆಕ್ಕ ಕೊಟ್ಟು ಮೃತರ ಮನೆಯವರಿಗೆ ಹೆಸರು ರದ್ದು ಮಾಡಿದ್ದಾಗಿ ಸುಳ್ಳು ಹೇಳಿ ನ್ಯಾಯ ಬೆಲೆ ಅಂಗಡಿ ಮಾಲೀಕ ರಾಜು ಸುಮಾರು 750 ಕ್ವಿಂಟಾಲ್ ಅಕ್ಕಿ ಪಡೆದಿದ್ದಾರೆ ಎನ್ನಲಾಗಿದೆ. 2-3 ವರ್ಷಗಳಿಂದ ಅಕ್ರಮ ನಡೆಸಿ ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ವಂಚಿಸಿರುವ ರಾಜು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.
ಇತ್ತೀಚೆಗೆ ಗ್ರಾಮದ ಮಹಿಳೆಯೊಬ್ಬರ ಕಾರ್ಡ್‌ನ್ನು ಆನ್ಲೈನ್ನಲ್ಲಿ ಪರಿಶೀಲಿಸುವ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಇದೇ ರೀತಿ ತನ್ನ ನ್ಯಾಯಬೆಲೆ ವ್ಯಾಪ್ತಿಯ ನಾಲ್ಕೈದು ಗ್ರಾಮಗಳಲ್ಲಿ ಸುಮಾರು 300ಕ್ಕೂ ಹೆಚ್ಚು ಕಾರ್ಡ್ನ ಬಳಕೆ ಮಾಡುತ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು