January 6, 2026

Newsnap Kannada

The World at your finger tips!

bpl

BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

Spread the love
  • ರಾಜ್ಯದ ನಾಲ್ಕು ಆಸ್ಪತ್ರೆಗಳಲ್ಲಿ ಸೌಲಭ್ಯ

ಬೆಂಗಳೂರು: ರಾಜ್ಯದ ಮೈಸೂರು, ಕಲಬುರಗಿ, ಹುಬ್ಬಳ್ಳಿ ಮತ್ತು ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗಳಲ್ಲಿ ಅಸ್ಥಿಮಜ್ಜೆ ಕಸಿ (ಬೋನ್ ಮ್ಯಾರೊ) ಚಿಕಿತ್ಸಾ ಸೌಲಭ್ಯ ಒದಗಿಸಲು ಸರ್ಕಾರ ತೀರ್ಮಾನಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸುತ್ತಾ, ಸಚಿವರು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಅಸ್ಥಿಮಜ್ಜೆ ಕಸಿಯನ್ನು ಸೇರಿಸಲಾಗಿದೆ ಎಂದು ವಿವರಿಸಿದರು.


ಇದನ್ನು ಓದಿ -ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ

ಈ ಯೋಜನೆಯಡಿ BPL ಕುಟುಂಬಗಳಿಗೆ ಉಚಿತವಾಗಿ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಲಭ್ಯವಾಗಲಿದೆ. ಈ ಸೇವೆಯನ್ನು ಮೈಸೂರು, ಕಲಬುರಗಿ, ಹುಬ್ಬಳ್ಳಿ ಹಾಗೂ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗಳಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

error: Content is protected !!