ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ

Team Newsnap
1 Min Read
BJP Parva begins in Old Mysore Province - CM Bommai ಹಳೇ ಮೈಸೂರು ಪ್ರಾಂತದಲ್ಲಿ ಬಿಜೆಪಿ ಪರ್ವ ಆರಂಭ - ಸಿಎಂ ಬೊಮ್ಮಾಯಿ

ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವುದ ಹಾಗೂ ನಿವೃತ್ತ ಪತ್ರಕರ್ತರಿಗೆ ನೀಡುತ್ತಿರುವ ಮಾಶಾಸನ ಹೆಚ್ಚಳಕ್ಕೂ ಕ್ರಮ ಕೈಗೊಳ್ಳುತ್ತೇವೆ ಎಂಬ ಭರವಸೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ವಿಜಯಪುರದಲ್ಲಿ ಶನಿವಾರ ನೀಡಿದರು.

ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿರುವ 37 ನೇ ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಪತ್ರಕರ್ತರು ಅಖಂಡ ಕರ್ನಾಟಕದ ಪತ್ರಕರ್ತರಾಗಬೇಕು. ಪತ್ರಿಕೆ ಇರಲಿಲ್ಲ ಎಂದರೆ ನಾವುಗಳು (ರಾಜಕಾರಣಿಗಳು )ಇರುತ್ತಿರಲಿಲ್ಲ. ರಾಜಕಾರಣಿಗಳು ಇಲ್ಲ ಅಂದರೆ ಪತ್ರಕರ್ತರೂ ಇರುತ್ತಿರಲಿಲ್ಲ. ಪತ್ರಕರ್ತರು ಮತ್ತು ರಾಜಕಾರಣಿಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದರು.

ರಾಜ್ಯ ಪತ್ರಕರ್ತರ ಸಂಘ ಗುರುತಿಸಿದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತದೆ ನಿವೃತ್ತ ಪತ್ರಕರ್ತರಿಗೆ ಮಾಶಾಸನ ಹೆಚ್ಚಳಕ್ಕೂ ಕ್ರಮ ಕೈಗೊಳ್ಳುತ್ತೇವೆ. ರಾಜ್ಯ ಪತ್ರಕರ್ತರಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದರು.

ಹೈಬ್ರೀಡ್ ಕಾಲದಲ್ಲೂ ವಿಜಯಪುರ ಜೋಳ ಶ್ರೇಷ್ಟ. ವಿಜಯಪುರ ಇಡೀ ದೇಶಕ್ಕೆ ಅನ್ನ ನೀಡುತ್ತದೆ. ನನ್ನನ್ನು ನಾಡದೊರೆ ಎನ್ನಬೇಡಿ ನಾಡದೊರೆ ಎಂದರೆ ನನಗೆ ಮುಜುಗರವಾಗುತ್ತೆ ಅದಕ್ಕೆ ಬ್ರೇಕ್ ಹಾಕಿ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Share This Article
Leave a comment