ಉಚಿತ ಬಸ್ ಪಾಸ್ – ಮನೆಯಿಂದ 50 K.M ವರೆಗೆ ಮಾತ್ರ ?

Team Newsnap
2 Min Read
Free bus travel for women to be launched from tomorrow: CM ನಾಳೆಯಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ: ಸಿಎಂ

ರಾಜ್ಯ ವಿಧಾನಸಭಾ ಚುನಾಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಿದ 5 ಗ್ಯಾರಂಟಿಗಳನ್ನು ಷರತ್ತುಗಳ ಜೊತೆ ಅನ್ವಯಿಸುವ ಕುರಿತು ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ.

ಯಾವ ಯೋಜನಗಳಿಗೆ ಎಷ್ಟು ಕಂಡೀಷನ್ ಹಾಕಬೇಕು, ಯೋಜನೆಗಳ ಮಾರ್ಗ ಎಂದು ಮಾರ್ಗಸೂಚಿ ಸಿದ್ದಪಡಿಸಿಕೊಂಡು ಬರುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ರಾಜ್ಯದ ಹಲವು ಕಡೆ ಬಸ್ ನಲ್ಲಿ ಮಹಿಳಾ ಪ್ರಯಾಣಿಕರು ಟಿಕೆಟ್ ಪಡೆಯುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ. ಎಲ್ಲರಿಗೂ ಫ್ರೀ ಬಸ್ ಪಾಸ್ ಎಂದು ಘೋಷಣೆ ಮಾಡಿದ ಕಾಂಗ್ರೆಸ್ ಇದೀಗ ಷರತ್ತು ವಿಧಿಸಲು ಮುಂದಾಗಿದೆ. ಫ್ರೀ ಬಸ್ ಪಾಸ್ ಪಡೆಯಲು ಷರತ್ತುಗಳು –

congress manifesto
  • ಮಹಿಳೆಯರು ಕರ್ನಾಟಕದವರೇ ಆಗಿರಬೇಕು.
  • ಈ ಪಾಸ್ ನೀಡಲು ಬಿಪಿಎಲ್ ಕಾರ್ಡ್ ಕಡ್ಡಾಯ ಮಾಡಲು ಚಿಂತನೆ ನಡೆಸಿದೆ.
  • ಕೆಂಪು ಬಸ್ ಗಳಲ್ಲಿ ಮಾತ್ರ ಫ್ರೀ ಬಸ್ ಪಾಸ್ ಅನ್ವಯವಾಗಲಿದ್ದು.
  • ತಮ್ಮ ಊರಿನಿಂದ 50 ಕಿಮೀವರೆಗೆ ಮಾತ್ರ ಪ್ರಯಾಣ ಮಾಡಬಹುದು.
  • ಈ ಎಲ್ಲಾ ಕಂಡೀಷನ್ ಹಾಕಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಮುಂದಿನ ಸಚಿವ ಸಂಪುಟದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ 5 ಇಲಾಖೆಗಳ ಜೊತೆಗೆ ಮಹತ್ವದ ಸಭೆ ನಡೆಸುತ್ತಿದ್ದಾರೆ. ಜೂನ್ 1 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಸಂಬಂಧ ಮಾಹಿತಿ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 5 ಗ್ಯಾರಂಟಿ ಯೋಜನೆ ಜಾರಿಗೆ ತರುವ ಸಂಬಂಧ ಅಧಿಕಾರಿಗಳಿಗೆ ಡೇಟಾ ಸಂಗ್ರಹಣೆ ಮಾಡುವಂತೆ ಹಾಗೂ ಗ್ಯಾರಂಟಿ ಯೋಜನೆಗಳ ಜಾರಿಗೆ ಎಷ್ಟು ಹಣ ಬೇಕು? ಯಾವ ರೀತಿ ಯೋಜನೆಗಳನ್ನು ಜಾರಿಗೆ ತರಬೇಕು? ಮಹಿಳೆಯರಿಗೆ 2,000 ರೂ. ನೀಡಲು ಅಂಕಿ-ಅಂಶಗಳನ್ನು ಸಂಗ್ರಹಿಸುವಂತೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿ ಐ.ಎಸ್.ಎನ್. ಪ್ರಸಾದ್ ಸೇರಿದಂತೆ ಹಿರಿಯ ಅಧಿಕಾರಿಗಳ ಜತೆ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಸಭೆ ನಡೆಸಿದ್ದು, 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಸಿದ್ಧತೆ ನಡೆಸುವಂತೆ ಸೂಚನೆ ನೀಡಿದ್ದರು.ನೂತನ ಸಚಿವರಿಗೆ 12 ಕೊಠಡಿ ಹಂಚಿಕೆ

ಕಾಂಗ್ರೆಸ್ ನ 5 ಗ್ಯಾರಂಟಿ ಯೋಜನೆಗಳು

  • ಗೃಹಲಕ್ಷ್ಮಿ ಯೋಜನೆ – ಪ್ರತಿತಿಂಗಳು ಮಹಿಳೆಯರಿಗೆ 2 ಸಾವಿರ ರೂ.
  • ಗೃಹಜ್ಯೋತಿ- 200 ಯುನಿಟ್ ವಿದ್ಯುತ್ ಉಚಿತ
  • ಅನ್ನಭಾಗ್ಯ-10 ಕೆಜಿ ಅಕ್ಕಿ ಉಚಿತ
  • ಶಕ್ತಿ-ಮಹಿಳೆಯರಿಗೆ ಉಚಿತವಾಗಿ ಬಸ್ ಪ್ರಯಾಣ
  • ಯುವನಿಧಿ- ಪದವಿಧರರಿಗೆ 3,000 ರೂ. ಡಿಪ್ಲೋಮಾ ಮಾಡಿದ ನಿರುದ್ಯೋಗಿಗಳಿಗೆ 1,500 ರೂ.ಸಿಗಲಿದೆ.
Share This Article
Leave a comment