ಬೆಂಗಳೂರು: ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮೊದಲ ಟಿಕೆಟ್ ಪಡೆದು ಗಮನ ಸೆಳೆದರು.
ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ‘ಶಕ್ತಿ’ಗೆ ಭಾನುವಾರ ಚಾಲನೆ ದೊರೆಯಿತು.
ಆಯ್ದ ಮಹಿಳೆಯರಿಗೆ ಟಿಕೆಟ್ ನೀಡುವ ಮೂಲಕ ಯೋಜನೆಗೆ ಸಿದ್ದರಾಮಯ್ಯ ಅವರು ಅಧಿಕೃತ ಚಾಲನೆ ನೀಡಿದರು.
ಯೋಜನೆ ಭಾಗವಾಗಿ ಸಿದ್ದರಾಮಯ್ಯ ಅವರಿಂದ ವಂದಿತಾ ಶರ್ಮಾ ಅವರು ಮೊದಲ ಟಿಕೆಟ್ ಪಡೆದರು. ಟಿಕೆಟ್ ಪ್ರದರ್ಶಿಸಿ ಖುಷಿ ವ್ಯಕ್ತಪಡಿಸಿದರು.
ನಂತರ ಎರಡನೇ ಟಿಕೆಟ್‌ನ್ನು ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಪಡೆದುಕೊಂಡರು.
ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆಯನ್ನು ಉದ್ಘಾಟಿಸಿದರು. ಮಧ್ಯಾಹ್ನ 1 ಗಂಟೆಯ ನಂತರ ಎಲ್ಲ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಈ ಸೌಲಭ್ಯ ಕಲ್ಪಿಸಲಾಯಿತು.ಮೂರು ಜಿಲ್ಲೆಯ ಹಾಲು ಉತ್ಪಾದಕರಿಗೆ ಪ್ರತಿ ಲೀ.ಹಾಲಿಗೆ ಹೆಚ್ಚುವರಿ 9.25 ರು ನೀಡಲು ಕೆಎಂಎಫ್ ತೀರ್ಮಾನ
ರಾಜ್ಯದ 18,609 ಬಸ್‌ಗಳು ಉಚಿತ ಪ್ರಯಾಣಕ್ಕೆ ಲಭ್ಯ ಇವೆ. 41.80 ಲಕ್ಷ ಮಹಿಳೆಯರು ಈ ಸೌಲಭ್ಯದ ಫಲಾನುಭವಿಗಳು ಎಂದು ಅಂದಾಜಿಸಲಾಗಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ