ನಾಳೆಯಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ: ಸಿಎಂ

Team Newsnap
2 Min Read
Free bus travel for women to be launched from tomorrow: CM ನಾಳೆಯಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ: ಸಿಎಂ
  • ಜುಲೈ 1 ರಿಂದ ಗುಲ್ಬರ್ಗದಲ್ಲಿ ಗೃಹಜ್ಯೋತಿ ಜಾರಿ
  • ಜುಲೈ 1 ರಂದೇ ಹತ್ತು ಕೆಜಿ ಆಹಾರ ಧಾನ್ಯ ಕೊಡುವ ಯೋಜನೆ ಮೈಸೂರಿನಲ್ಲಿ ಚಾಲನೆ
  • ಜುಲೈ 16 ರಿಂದ ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ

ಮೈಸೂರು : ನಾಳೆಯಿಂದಲೇ ರಾಜ್ಯದ ಎಲ್ಲಾ ಮಹಿಳೆಯರಿಗ ಉಚಿತ ಸಾರಿಗೆ ಬಸ್ ಪ್ರಯಾಣ ಯೋಜನೆ ಜಾರಿ ಆಗುತ್ತದೆ. ಮಹಿಳೆಯರಿಗೆ ವೋಲ್ವೋ, ಎಸಿ ಬಸ್ ಬಿಟ್ಟು ಇತರೆ ಬಸ್‌ಗಳಲ್ಲಿ ಉಚಿತ ಪ್ರಯಾಣಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ತಿಳಿಸಿದರು.

ಸುತ್ತೂರಿನ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾಳೆ (ಜೂನ್ 11) ಮಧ್ಯಾಹ್ನ 1 ಗಂಟೆಯಿಂದ‌ ಯೋಜನೆ ಚಾಲನೆ ಆಗುವುದು. ವಿಧಾನಸೌಧದ ಬಳಿ ನಾನು, ಡಿಸಿಎಂ ಹಾಗೂ ಸಾರಿಗೆ ಮಂತ್ರಿ ಹಾಗೂ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಏಕಕಾಲಕ್ಕೆ ಯೋಜನೆ ಜಾರಿಯಾಗುತ್ತದೆ ಎಂದು ಹೇಳಿದರು.

  • ಜುಲೈ 1 ರಿಂದ ಗುಲ್ಬರ್ಗದಲ್ಲಿ ಗೃಹಜ್ಯೋತಿ ಜಾರಿ ಆಗುತ್ತದೆ.
  • ಜುಲೈ 1 ರಂದೇ ಹತ್ತು ಕೆಜಿ ಆಹಾರ ಧಾನ್ಯ ಕೊಡುವ ಯೋಜನೆ ಮೈಸೂರಿನಲ್ಲಿ ಚಾಲನೆ ನೀಡಲಾಗುವುದು.
  • ಜುಲೈ 16 ರಿಂದ ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ ಆಗುತ್ತೆ.
  • 2022-23ರಲ್ಲಿ ಪಾಸ್ ಆದ ಪದವಿ, ಹಾಗೂ ಡಿಪ್ಲೋಮಾ ವಿದ್ಯಾರ್ಥಿಗಳು 24 ತಿಂಗಳಲ್ಲಿ ಕೆಲಸ ಸಿಗದಿದ್ದರೆ ಹಣ.
  • ಮಧ್ಯೆ ಸರ್ಕಾರಿ ಅಥವಾ ಖಾಸಗಿ ಕೆಲಸ ಸಿಕ್ಕರೆ ಹಣ ಸಿಗುವುದಿಲ್ಲ ಎಂದು ಸ್ಷಪ್ಟವಾಗಿ ಸಿಎಂ ಹೇಳಿದರು.

ಜಿಎಸ್ ಟಿ ಹಣಕ್ಕೆ ಒತ್ತಾಯ :

ರಾಜ್ಯದ ಜಿಎಸ್‌ಟಿ ಪಾಲಿನ ಹಣ ನ್ಯಾಯಯುತವಾಗಿ ಕೇಂದ್ರದಿಂದ ನಮಗೆ ಬೇಕಾದ ಹಣವನ್ನು ಒತ್ತಾಯದಿಂದ ಕೇಳುತ್ತೇವೆ ಎಂದು ತಿಳಿಸಿದರು.

ಸೋಮವಾರ ಸಭೆ :

ರಾಜ್ಯದಲ್ಲಿ ಮಳೆ ಕೊರತೆ ಆತಂಕ ವಿಚಾರವಾಗಿ ಸೋಮವಾರ ಕುಡಿಯುವ ನೀರಿನ ಸಂಬಂಧ ಅಧಿಕಾರಿಗಳ ಸಭೆ ಕರೆಯಲಾಗಿದೆ.
ಮಳೆ ಸಮಸ್ಯೆ ಇರುವ ಜಿಲ್ಲಾಧಿಕಾರಿಗಳ ಜೊತೆ ಕೂಡ ವೀಡಿಯೋ ಕಾನ್ಫರೆನ್ಸ್ ಮಾಡಿ ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದರು.ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಪುನರ್ ಜಾರಿ!

ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ ಹಾಗೂ ಇತರ ಗಣ್ಯರು ಮುಖ್ಯ ಮಂತ್ರಿಗಳ ಜೊತೆಯಲ್ಲಿ ಇದ್ದರು.

Share This Article
Leave a comment