March 11, 2026

Newsnap Kannada

The World at your finger tips!

BMTC

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವಕ್ಕೆ ಭರ್ಜರಿ ಗಿಫ್ಟ್: ಆ.15ರಂದು ಬೆಂಗಳೂರಿನಲ್ಲಿ ಉಚಿತ ಬಸ್ ಪ್ರಯಾಣ

Spread the love

75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಸ್ ಪ್ರಯಾಣಿಕರಿಗೆ ಭರ್ಜರಿ ಕೊಡುಗೆ ನೀಡಿದೆ. ಬೆಂಗಳೂರಿನಲ್ಲಿ ಉಚಿತ ಬಸ್ ಪ್ರಯಾಣ ಘೋಷಿಸಿದೆ.

ಆಗಸ್ಟ್ 15ರಂದು ಇಡೀ ದಿನ ಬೆಂಗಳೂರು ನಗರದಾದ್ಯಂತ ಪ್ರಯಾಣಿಕರು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಬಹುದಾಗಿದೆ.

ಬಿಎಂಟಿಸಿ, ವೋಲ್ವೋ ಸೇರಿ ಎಲ್ಲಾ ಬಸ್ ಗಳಲ್ಲಿಯೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಸರ್ಕಾರ ಉಚಿತ ಬಸ್ ಪ್ರಯಾಣಕ್ಕೆ ಸಮ್ಮತಿ ಸೂಚಿಸಿದೆ ಉಚಿತ ಸೇವೆಯಿಂದ ಬಿಎಂಟಿಸಿಗೆ 3 ಕೋಟಿ ನಷ್ಟವುಂಟಾಗಲಿದೆ. ಆದರೆ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಈ ಕೊಡುಗೆ ನೀಡಲಾಗುತ್ತಿದೆ ಎಂದು ಬಿಎಂಟಿಸಿ ತಿಳಿಸಿದೆ.

error: Content is protected !!